Important
Trending

ಭೀಕರ ರಸ್ತೆ ಅಪಘಾತ: ವಿದ್ಯುತ್ ಕಂಬಕ್ಕೆ ಡಿಕ್ಕಿ ಪಡಿಸಿಕೊಂಡ ಕಾರು: ಸ್ಥಳದಲ್ಲಿಯೇ ಮೃತಪಟ್ಟ ಹೈಕೋರ್ಟ್ ಅಧಿಕಾರಿ ಯಾರು ?

ಅಂಕೋಲಾ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಪಡಿಸಿಕೊಂಡ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಓರ್ವ ಸ್ಥಳದಲ್ಲೇ ಮೃತ ಪಟ್ಟು ಇನ್ನೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನಲ್ಲಿ ಹಾದು ಹೋಗಿರುವ ವಜ್ರಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.

ಕಾರು ಚಲಾಯಿಸಿಕೊಂಡು ತೆರಳುತ್ತಿದ್ದ ಹೈಕೋರ್ಟ್ ಅಧಿಕಾರಿ ಯಶವಂತ ಪ್ರಭು (52) ಎನ್ನಲಾದ ವ್ಯಕ್ತಿಯೆ ಮೃತ ದುರ್ದೈವಿಯಾಗಿದ್ದು, ಗಾಯಗೊಂಡ ಆತನ ಪತ್ನಿಯನ್ನು ಅಂಬುಲೆನ್ಸ್ ಮೂಲಕ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.

ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆ ಸಾಗುತ್ತಿದ್ದ ಮಾರುತಿ 800 ಕಾರು ಅದಾವುದೋ ಕಾರಣದಿಂದ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಸಿಪಿಐ ಪ್ರಶಾಂತ ತೋಟಗಿ, ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಘಟನೆ ಕುರಿತು ಹೆಚ್ಚಿನ ವಿವರಗಳುತಿಳಿದು ಬರಬೇಕಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button