ಬ್ರೇಕ್ ಫೇಲ್ ಆದ ಲಾರಿ: ಧರ್ಮಸ್ಥಳಕ್ಕೆ ಹೊರಟಿದ್ದವರ ಬೊಲೆರೊಗೆ ಹಿಂಬದಿಯಿಂದ ಡಿಕ್ಕಿ: ಇಬ್ಬರು ಮಹಿಳೆಯರ ಸಾವು

ಡಿಕ್ಕಿಯ ರಭಸಕ್ಕೆ ತಿರುಗಿದ ಬೊಲೆರೊ, ಎದುರು ಬರುತ್ತಿದ್ದ ಟಿಪ್ಪರ್ ಗೆ ಡಿಕ್ಕಿಯಾಗಿದೆ. ಟಿಪ್ಪರ್ ಹಾಗೂ ಲಾರಿಯ ನಡುವೆ ಸಿಕ್ಕಿ ಬೊಲೆರೊ ಅಪ್ಪಚ್ಚಿಯಾಗಿದ್ದು, ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿದ್ದಾಳೆ.

ಕಾರವಾರ: ಬೊಲೆರೊ ಹಾಗೂ ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಈರ್ವರು ಮಹಿಳೆಯರು ಮೃತಪಟ್ಟಿದ್ದು, ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಗಲಕೋಟ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ ಧರ್ಮಸ್ಥಳಕ್ಕೆ ಬೊಲೆರೋದಲ್ಲಿ ಪ್ರಯಾಣಿಸುತ್ತಿದ್ದರು. ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಅರಬೈಲ್ ಘಟ್ಟದಲ್ಲಿ ಲಾರಿಯೊಂದರ, ಬ್ರೇಕ್ ಫೇಲ್ ಆಗಿದ್ದು, ಧರ್ಮಸ್ಥಳಕ್ಕೆ ಹೊರಟಿದ್ದವರ ಬೊಲೆರೊಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ತಿರುಗಿದ ಬೊಲೆರೊ, ಎದುರು ಬರುತ್ತಿದ್ದ ಟಿಪ್ಪರ್ ಗೆ ಡಿಕ್ಕಿಯಾಗಿದೆ. ಟಿಪ್ಪರ್ ಹಾಗೂ ಲಾರಿಯ ನಡುವೆ ಸಿಕ್ಕಿ ಬೊಲೆರೊ ಅಪ್ಪಚ್ಚಿಯಾಗಿದ್ದು, ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿದ್ದಾಳೆ. ಇನ್ನುಳಿದ ಏಳು ಮಂದಿಯನ್ನು ಬೊಲೆರೊದಿಂದ ಹೊರ ತೆಗೆದ ಸ್ಥಳೀಯರು ಹಾಗೂ ಪೊಲೀಸರು ಕೂಡಲೇ ತಾಲೂಕು ಆಸ್ಪತ್ರೆಗೆ ಸಾಗಿಸಿದರಾದರೂ ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಗೆ ಸದ್ಯ ಚಿಕಿತ್ಸೆ ಮುಂದುವರಿದಿದೆ. ಹೊಸ ಬೊಲೆರೊ ಖರೀಸಿದ್ದ ಕಾರಣ ಇವರೆಲ್ಲರೂ ಧರ್ಮಸ್ಥಳಕ್ಕೆ ತೆರಳುತ್ತಿದ್ದರು ಎಂಬ ಮಾಹಿತಿ ಲಭಿಸಿದೆ.

” ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777

ವಿಸ್ಮಯ ನ್ಯೂಸ್, ಕಾರವಾರ

Exit mobile version