Follow Us On

WhatsApp Group
Important
Trending

ಸೇನೆ ಭರ್ತಿ ಪ್ರಕ್ರಿಯೆ ಮುಗಿಸಿಕೊಂಡು ಬರುತ್ತಿದ್ದ 15 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ: ತಪ್ಪಿದು ಭಾರೀ ಅನಾಹುತ

ಯಲ್ಲಾಪುರ: ಅವರೆಲ್ಲರೂ ಸೇನೆ ಸೇರಬೇಕೆಂಬ ಹೆಬ್ಬಯಕೆಯಿಂದ ಉಡುಪಿಯಲ್ಲಿ ನಡೆದ ಸೇನಾ ಭರ್ತಿಗೆ ತೆರಳಿದ್ದರು. ಸೇನಾ ಭರ್ತಿಯ ಪ್ರಕಿಯೆ ಮುಗಿಸಿಕೊಂಡು ಮರಳಿ ತಮ್ಮೂರಿನತ್ತ ಮರಳುತ್ತಿದ್ದರು. ಆದರೆ, ದಾರಿ ಮಧ್ಯೆ ದುರ್ಘಟನೆಯೊಂದು ಸಂಭವಿಸಿದ್ದು, ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರಾಗಿದ್ದಾರೆ. ಹೌದು, ಸೇನೆ ಸೇರಬೇಕೆಂಬ ಬಯಕೆಯಿಂದ ಬಾಗಲಕೋಟೆಯಿಂದ ಉಡುಪಿಗೆ ಹೋಗಿ, ಪ್ರಕ್ರಿಯೆ ಮುಗಿಸಿಕೊಂಡು ವಾಪಸ್ ಬರುವಾಗ, ತಾಲೂಕಿನ ಕೋಳಿಕೇರಿ ಕ್ರೂಸರ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಸೇನಾ ಭರ್ತಿ ಪ್ರಕ್ರಿಯೆ ಮುಗಿಸಿಕೊಂಡು ಬರುತ್ತಿದ್ದ 15 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ.

ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಮೊದಲು ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚು ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಹಲವರ ಕೈ ಕಾಲುಗಳು ಮುರಿದಿದೆ ಎನ್ನಲಾಗಿದ್ದು, ಕೆಲವರಿಗೆ ತೀವ್ರತರವಾದ ರಕ್ತಸ್ರಾವವಾಗಿದೆ. ಆದರೆ, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button