Join Our

WhatsApp Group
Info
Trending

ಗಮನಸೆಳೆದ “ಜಗುಲಿಯ ಮೇಲಿನ ಸಾಧಕರು” ಕಾರ್ಯಕ್ರಮ

ಹೊನ್ನಾವರ: ಶಿಕ್ಷಣ ಸಂಸ್ಥೆಗಳಿಗೆ ಸಭಾಹಿತ ಕುಟುಂಬದ ಕೊಡುಗೆ ಅಪಾರವಾದದ್ದು. ಒಂದು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಅಕ್ಷರ ವಂಚಿತರಿಗೆ ಅಕ್ಷರ ನೀಡಿರುವ ಕಾರ್ಯ ಶ್ಲಾಘನೀಯವಾದದ್ದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹರೀಶ್ ಗಾಂವ್ಕರ್ ಹೇಳಿದರು. ಅವರು ಆರ್.ಇ.ಎಸ್. ಪ್ರೌಢ ಶಾಲೆಯಲ್ಲಿ ನಡೆದ ಹಳದೀಪುರ ಕ್ಲಸ್ಟರ್ ವ್ಯಾಪ್ತಿಯ “ಜಗುಲಿಯ ಮೇಲಿನ ಸಾಧಕರು” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಡಾ.ಜಿ.ಎನ್.ಸಭಾಹಿತರ ಕಾಲದಲ್ಲಿ ಸ್ಥಾಪಿತವಾದ ಆರ್.ಇ.ಎಸ್. ಶಿಕ್ಷಣ ಸಂಸ್ಥೆ ಇಂದು ಪದವಿಪೂರ್ವ ಶಿಕ್ಷಣ ಸಂಸ್ಥೆಯಾಗಿ ಬೆಳೆದಿರುತ್ತದೆ. ಇಂತಹ ಸಂಸ್ಥಾಪಕ ಕುಟುಂಬದ ಸಾಧಕರಾದ ಡಾ. ಜಿ.ಜಿ. ಸಭಾಹಿತ ಅವರನ್ನು ಮಕ್ಕಳಿಗೆ ಪರಿಚಯಿಸುವುದರ ಮೂಲಕ ಅವರ ಆದರ್ಶ ಗುಣ ಮಕ್ಕಳ ಮುಂದಿನ ಬದುಕಿಗೆ ದಾರಿದೀಪವಾಗಲಿ ಎಂದರು. ವರ್ಗಾವಣೆಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್. ನಾಯ್ಕರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿದ ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಆರ್. ನಾಯ್ಕ ಮಾತನಾಡಿ ಸ್ಥಳೀಯ ಸಾಧಕರನ್ನು ನಮ್ಮ ಇಂದಿನ ಪೀಳಿಗೆಗೆ ಪರಿಚಯಿಸುವುದರ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುವುದು ಶ್ಲಾಘನೀಯ ಕಾರ್ಯ ಎಂದರು. ಮಗು ತನ್ನ ಸುತ್ತಮುತ್ತಲಿನ ಪರಿಸರದ ಸಾಧಕರನ್ನು ಪರಿಚಯಿಸಿ ಕೊಳ್ಳುವುದರ ಜೊತೆಗೆ ಮುಂದಿನ ಭವಿಷ್ಯತ್ತನ್ನು ರೂಪಿಸಿಕೊಳ್ಳಲು ಇಂತಹ ಕಾರ್ಯಕ್ರಮ ನೆರವಾಗಲಿ ಎಂದರು. ಅಧ್ಯಕ್ಷತೆ ವಹಿಸಿದ್ದ ಡಾ. ಜಿ.ಜಿ. ಸಭಾಹಿತ ಮಾತನಾಡಿ, “ನೀನು ನೆಲ ನೋಡು, ನೆಲ ನಿನ್ನನ್ನು ನೋಡುತ್ತದೆ” ತಂದೆಯವರ ಮಾತನ್ನು ನೆನಪಿಸಿಕೊಳ್ಳುತ್ತಾ ನಾವು ಸೇವಾ ಮನೋಭಾವನೆಯಿಂದ ಕೆಲಸ ಮಾಡಿದರೆ ಸಮಾಜದ ನಮ್ಮನ್ನು ಗುರುತಿಸುತ್ತದೆ.ಈ ದಿಶೆಯಲ್ಲಿ ಮಕ್ಕಳು ಸೇವಾ ಮನೋಭಾವನೆಯಿಂದ ತೊಡಗಿಸಿಕೊಂಡು ಸಮಾಜಕ್ಕೆ ಉತ್ತಮ ಪ್ರಜೆಗಳಾಗಿ ಎಂದರು.

ವೇದಿಕೆಯಲ್ಲಿ ಸಮನ್ವಯಾಧಿಕಾರಿ ಎಸ್. ಎಂ.ಹೆಗಡೆ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ ಜಿಲ್ಲಾ ಶಿಕ್ಷಕ ಸಂಘದ ಗೌರವಾಧ್ಯಕ್ಷ ಸುದೀಶ ನಾಯ್ಕ, ತಾಲೂಕ ಶಿಕ್ಷಕ ಸಂಘದ ಉಪಾಧ್ಯಕ್ಷ ಸುರೇಶ ನಾಯ್ಕ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಸೀಮಾ ನಾಯಕ, ಸತೀಶ ನಾಯ್ಕ, ಪ್ರೌಢ ಶಾಲೆಯ ಮುಖ್ಯಾಧ್ಯಾಪಕ ಅರುಣ ನಾಯಕ, ಪ್ರಾಚಾರ್ಯ ವಿ.ಎಸ್.ನಾಯ್ಕ, 9ನೇ ತರಗತಿ ವಿದ್ಯಾರ್ಥಿ ಕುಮಾರಿ ಸಿಂಚನ ಶಂಕರ ನಾಯ್ಕ ಉಪಸ್ಥಿತರಿದ್ದರು. ಪಿ.ಆರ್.ನಾಯ್ಕ ಸ್ವಾಗತಿಸಿ,ಪ್ರಾಚಾರ್ಯ ವಿ.ಎಸ್.ನಾಯ್ಕ ವಂದಿಸಿದರು. ಶಿಕ್ಷಕ ಸಂಘದ ಉಪಾಧ್ಯಕ್ಷ ಸುರೇಶ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777

ವಿಸ್ಮಯ ನ್ಯೂಸ್, ಹೊನ್ನಾವರ

Check Also
Close
Back to top button