Follow Us On

WhatsApp Group
Important
Trending

ಕಲ್ಲಂಗಡಿ ವಾಹನ ನಡುರಸ್ತೆಯಲ್ಲೇ ಪಲ್ಟಿ: 3 ಲಕ್ಷಕ್ಕೂ ಅಧಿಕ ಹಾನಿ

ಕಾರವಾರ: ಕಲ್ಲಂಗಡಿ ತುಂಬಿದ ಲಾರಿ ಪಲ್ಟಿಯಾಗಿ ಕಲ್ಲಂಡಿಯೆಲ್ಲಾ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ತಾಲೂಕಿನ ಅಸ್ನೋಟಿಯ ಭಗತವಾಡದ ಹೆದ್ದಾರಿಯಲ್ಲಿ ನಡೆದಿದೆ. ವಾಹನದಲ್ಲಿ ಕಲ್ಲಂಗಡಿಯನ್ನು ನೆರೆಯ ರಾಜ್ಯದ ಗೋವಾಕ್ಕೆ ಸಾಗಿಸಲಾಗುತ್ತಿತ್ತು. ಅತಿಹೆಚ್ಚು ಕಲ್ಲಂಗಡಿಯನ್ನು ವಾಹನದಲ್ಲಿ ತುಂಬಲಾಗಿತ್ತು ಎನ್ನಲಾಗಿದ್ದು, ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ.

ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ವಾಹನ ಪಲ್ಟಿಯಾದ ಪರಿಣಾಮ ಕಲ್ಲಂಗಡಿಯೆಲ್ಲಾ ರಸ್ತೆ ಮೇಲೆ ಬಿದ್ದು ಒಡೆದು ಅಪಾರ ಹಾನಿಯಾಗಿದೆ. 3 ಲಕ್ಷಕ್ಕೂ ಅಧಿಕ ನಷ್ಟವಾಗಿದೆ ಎನ್ನಲಾಗಿದೆ. ಚಿತ್ತಾಕುಲ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಾಲಕನಿಗೆ ಚಿಕ್ಕಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777..

ವಿಸ್ಮಯ ನ್ಯೂಸ್, ಕಾರವಾರ

Back to top button