Follow Us On

WhatsApp Group
Uttara Kannada
Trending

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕರೊನಾ: ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ

ಕಾರವಾರ: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿನ ಕೋವಿಡ್-19 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ, ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿದೆ. ತನ್ನಿಮಿತ್ತ ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆ ತೀವ್ರವಾಗಿ ಹರಡದಂತೆ ತಡೆಗಟ್ಟಲು ಸರಕಾರ ಸೂಚಿಸಿರುವ ನಿಯಮಾವಳಿಗಳನ್ನು ಅಧಿಕಾರಿಗಳು ಹಾಗೂ ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಅಂತರಾಜ್ಯ ಗಡಿ ಭಾಗಗಳಲ್ಲಿ ಚೆಕ್‌ಪೋಸ್ಟ್ಗಳನ್ನು ತೆರೆದು ಕೇರಳ ಮತ್ತು ಮಹಾರಾಷ್ಟ್ರ ದಿಂದ ಜಿಲ್ಲೆಗೆ ಆಗಮಿಸುವ ಜನರನ್ನು ಕಟ್ಟು ನಿಟ್ಟಾಗಿ ತಪಾಸಣೆಗೆ ಓಳಪಡಿಸಲು ಹಾಗೂ ಪಿ.ಸಿ.ಆರ್ ನೆಗೆಟಿವ್ ವರದಿ ಇದ್ದಲ್ಲಿ ಮಾತ್ರ ಅವರಿಗೆ ಪ್ರವೇಶ ನೀಡಲು ಸರಕಾರ ಸೂಚಿಸಿದೆ ಎಂದಿದ್ದಾರೆ. ಕೋವಿಡ್ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯನ್ನು ಕಡ್ಡಾಯಗೋಳಿಸಲಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಜಾರಿಗೋಳಿಸಬೇಕು.

ಕೋವಿಡ್ ಲಸಿಕೆ ಪಡೆದುಕೊಳ್ಳುವುದು ಹಾಗೂ ಕೋವಿಡ್ ಪರೀಕ್ಷೆಗೆ ಓಳಪಡುವುದು ಇತ್ಯಾದಿಗಳ ಕುರಿತು ವ್ಯಾಪಕ ಪ್ರಚಾರ ಕೈಗೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಂಬರುವ ಯುಗಾದಿ ಇತ್ಯಾದಿ ಹಬ್ಬಗಳ ಸಂದರ್ಭದಲ್ಲಿ ಜಿಲ್ಲೆಯ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಸಾರ್ವಜನಿಕ ಉದ್ಯಾನವನಗಳು, ಮಾರುಕಟ್ಟೆಗಳು, ಧಾರ್ಮಿಕ ಪ್ರದೇಶಗಳು ಇತ್ಯಾದಿಗಳಲ್ಲಿ ಸಾರ್ವಜನಿಕ ಸಮಾರಂಭ ಸಭೆಗಳನ್ನು ನಡೆಸದಂತೆಯೂ ಸಹ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777..

ವಿಸ್ಮಯ ನ್ಯೂಸ್., ಕಾರವಾರ

Back to top button