Follow Us On

WhatsApp Group
Focus News
Trending

ರಾಮಚಂದ್ರಾಪುರ ಮಠಕ್ಕೆ 10 ಕೋಟಿ ರೂಪಾಯಿ ಬ್ಲ್ಯಾಕ್ ಮೇಲ್ ಕೇಸ್ : ಪ್ರಕರಣ ಕೈಬಿಡಬೇಕು ಎಂದು ಒತ್ತಾಯಿಸಿ ಆರೋಪಿಗಳು ಮಾಡಿದ್ದ ಅರ್ಜಿ ವಜಾ

ಬೆಂಗಳೂರು: ಹೊಸನಗರದ ಶ್ರೀರಾಮಚಂದ್ರಾಪುರ ಮಠಕ್ಕೆ 10 ಕೋಟಿ ರೂಪಾಯಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದಲ್ಲಿ ತಮ್ಮ ವಿರುದ್ಧದ ಪ್ರಕರಣಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಐವರು ಆರೋಪಿಗಳು ಮಾಡಿದ್ದ ಮನವಿಯನ್ನು ಬೆಂಗಳೂರು ನಗರ ನ್ಯಾಯಾಲಯ ತಿರಸ್ಕರಿಸಿದೆ.

“ಶ್ರೀಮಠದ ಧರ್ಮಚಕ್ರ ಟ್ರಸ್ಟ್ನಲ್ಲಿ ಅವ್ಯವಹಾರ ಆಗಿದೆ ಎಂದು ರಾಜ್ಯ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೇವೆ; ಅದು ವಿಚಾರಣೆಗೆ ಬರಲಿದ್ದು, ಮಠದ ಮರ್ಯಾದೆ ಹರಾಜು ಹಾಕುತ್ತೇವೆ” ಎಂದು ಪ್ರಕರಣದ ಆರೋಪಿಗಳು ಶ್ರೀಮಠದ ಭಕ್ತರಿಗೆ ದೂರವಾಣಿ ಕರೆ ಮಾಡಿ, ಪಿಐಎಲ್ ವಾಪಾಸು ಪಡೆಯಬೇಕಿದ್ದರೆ 10 ಕೋಟಿ ರೂಪಾಯಿ ನೀಡುವಂತೆ ಒತ್ತಾಯಿಸಿದ್ದರು. ಈ ಸಂಬoಧ ಶ್ರೀಮಠದ ವತಿಯಿಂದ ಬೆಂಗಳೂರಿನ ಗಿರಿನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಸೆಕ್ಷನ್ 239ರ ಅನ್ವಯ, ಆರೋಪಿಗಳ ವಿರುದ್ಧ ಮಾಡಿರುವ ಆರೋಪ ಆಧಾರರಹಿತ ಎಂದು ಮ್ಯಾಜಿಸ್ಟ್ರೇಟರಿಗೆ ಮನವರಿಕೆಯಾದಲ್ಲಿ ಮಾತ್ರ ಅವರನ್ನು ಪ್ರಕರಣದಿಂದ ಕೈಬಿಡಬಹುದಾಗಿದೆ. ಆರೋಪಿಗಳ ವಿರುದ್ಧ ಚಾರ್ಜ್ ಫ್ರೇಮ್ ಮಾಡಲು ಅಗತ್ಯವಾದ ಸಾಕಷ್ಟು ಪುರಾವೆಗಳು ಇರುವುದನ್ನು ವಿಚಾರಣಾ ನ್ಯಾಯಾಲಯ ದೃಢಪಡಿಸಿದೆ ಎಂದು ಬೆಂಗಳೂರಿನ 64ನೇ ಹೆಚ್ಚುವರಿ ನಗರ ಸಿವಿಲ್ & ಸೆಷನ್ಸ್ ನ್ಯಾಯಾಧೀಶ ರಾಜೇಶ್ವರ ಅವರು ತೀರ್ಪಿನಲ್ಲಿ ಸ್ಪಷ್ಟಪಡಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777..

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button