ಮತ್ತೆ 16 ವಿದ್ಯಾರ್ಥಿಗಳಿಗೆ ಕರೊನಾ ದೃಢ: ಈ ಶಾಲೆಯಲ್ಲಿ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ: ಪೋಷಕರಲ್ಲಿ ಹೆಚ್ಚುತ್ತಿದೆ ಆತಂಕ
ಕಾರವಾರ: ಜಿಲ್ಲೆಯಲ್ಲಿ ಕರೊನಾ ಹರಡುವಿಕೆ ವೇಗವಾಗಿದ್ದು, ಪ್ರಮುಖವಾಗಿ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಸೋಂಕು ದೃಢಪಡುತ್ತಿದೆ. ಯಲ್ಲಾಪುರದ ವೈಟಿಎಸ್‌ಎಸ್ ಶಿಕ್ಷಣ ಸಂಸ್ಥೆಯ 22 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡ ಬೆನ್ನಲ್ಲೆ, ಅವರೆಲ್ಲರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ತಪಾಸಣೆ ಮಾಡಲಾಗಿತ್ತು. ಇದೀಗ ವರದಿ ಬಂದಿದ್ದು, ಇವರಲ್ಲಿ ಮತ್ತೆ 16 ವಿದ್ಯಾರ್ಥಿಗಳಲ್ಲಿ ಕರೊನಾ ಪಾಸಿಟಿವ್ ಬಂದಿದೆ.
ವೈಟಿಎಸ್‌ಎಸ್ ಶಿಕ್ಷಣ ಸಂಸ್ಥೆಯಲ್ಲಿ ಇಬ್ಬರು ಶಿಕ್ಷಕರು ಸೇರಿದಂತೆ 22 ವಿದ್ಯಾರ್ಥಿಗಳಿಗೆ ಕರೊನಾ ದೃಢಪಟ್ಟ ಹಿನ್ನಲೆಯಲ್ಲಿ ಶಾಲೆಯ 49 ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹಾಗೂ 272 ವಿದ್ಯಾರ್ಥಿಗಳ ಗಂಟಲು ದ್ರವದ ಪರೀಕ್ಷೆ ನಡೆಸಲಾಗಿತ್ತು. ಅವರಲ್ಲಿ ಬುಧವಾರ 16 ಜನರಿಗೆ ಸೋಂಕು ದೃಢಪಟ್ಟಿದ್ದು, ಎಲ್ಲರೂ ವಿದ್ಯಾರ್ಥಿಗಳು ಎನ್ನಲಾಗಿದೆ. ಇದೇ ವೇಳೆ, ಗಂಟಲು ದ್ರವದ ಪರೀಕ್ಷೆಗೊಳಗಾದ ಒಟ್ಟು 1085 ಜನರ ಫಲಿತಾಂಶ ಬರುವುದು ಬಾಕಿ ಇದೆ ಎನ್ನಲಾಗಿದೆ.
ಕಾಳಮ್ಮ ನಗರದ ಸರ್ಕಾರಿ ಶಾಲೆಯ 173 ವಿದ್ಯಾರ್ಥುಗಳ ಗಂಟಲುದ್ರವದ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಜಿಲ್ಲೆ ಮತ್ತು ತಾಲೂಕಿನಲ್ಲಿ ಶಾಲೆಯ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಪ್ರಕರಣ ಕಂಡುಬರುತ್ತಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ಆದರೆ, ಯಾರು ಭಯ ಪಡುವ ಅಗತ್ಯವಿಲ್ಲವಾಗಿದ್ದು, ಜಿಲ್ಲಾಡಳಿತ, ತಾಲೂಕಾಡಳಿತ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
ವಿಸ್ಮಯ ನ್ಯೂಸ್, ಯಲ್ಲಾಪುರ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888