Follow Us On

Google News
Important
Trending

ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿ ರಸ್ತೆಯಲ್ಲೇ ಪಲ್ಟಿ: ಮದ್ಯ ಹೊತ್ತೊಯ್ದ ಸಾರ್ವಜನಿಕರು

ಅಂಕೋಲಾ: ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಅಂಕೋಲಾ ತಾಲೂಕಿನ ಅಡ್ಲೂರು ಬಳಿ ಇಂದು ನಡೆದಿದೆ. ಮಹಾರಾಷ್ಟ್ರ ಮೂಲದ ಲಾರಿ ಮೂಲಕ ಗೋವಾದಿಂದ ಹುಬ್ಬಳ್ಳಿ ಕಡೆಗೆ ಸಾಗಾಟ ಮಾಡುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿ ತುಂಬಾ ವಿವಿಧ ಬ್ರಾಂಡ್ ನ ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು.

ಲಾರಿ ಪಲ್ಟಿಯಾದ ಬೆನ್ನಲ್ಲೆ ಆರೋಪಿಗಳು ಪರಾರಿಯಾಗಿದ್ದಾರೆ. ಲಾರಿಯಲ್ಲಿದ್ದ ಗೋವಾ ಮದ್ಯದ ಮೌಲ್ಯವನ್ನು ಲೆಕ್ಕಹಾಕಲಾಗುತ್ತಿದ್ದು ಐದು ಲಕ್ಷಕ್ಕೂ ಅಧಿಕ ಮೌಲ್ಯದ ಮದ್ಯ ಇರಬಹುದು ಎಂದು ಅಂದಾಜಿಸಲಾಗಿದೆ. ಇದೇ ವೇಳೆ ರಸ್ತೆಯಲ್ಲಿ ಬಿದ್ದಿದ್ದ ಮದ್ಯವನ್ನು ಸಾರ್ವಜನಿಕರು ಹೊತ್ತೊಯ್ದ ಘಟನೆ ನಡೆದಿದೆ. ಅಳಿದುಳಿದ ಮದ್ಯದ ಬಾಕ್ಸನ್ನು ಬೇರೆ ಲಾರಿ ಮೂಲಕ ಠಾಣೆಗೆ ಸಾಗಿಸಿ, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಿಸ್ಮಯ ನ್ಯೂಸ್, ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button