ಅತಿವೇಗದಲ್ಲಿ ಬಂದು ಬೈಕ್‌ಗೆ ಡಿಕ್ಕಿಹೊಡೆದ ಟಿಪ್ಪರ್: ಚಿಕಿತ್ಸೆ ಫಲಿಸದೆ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಕುಮಟಾ: ಅತಿ ವೇಗದಲ್ಲಿದ್ದ ಟಿಪ್ಪರ್ ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಯ ಮೇಲೆ ಬಿದ್ದು ಎದೆಗೆ ಹಾಗೂ ತಲೆಗೆ ಗಂಭೀರ ಗಾಯಗೊಂಡು, ಬಳಿಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದಿದೆ. ಹೌದು, ಬೈಕ್ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಕ್ರಾಸ್ ಬಳಿ ಬೈಕ್ ಮೇಲೆ ರಸ್ತೆ ದಾಟುತ್ತಿರುವಾಗ ಟಿಪ್ಪರ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.ಕುಮಟಾ ತಾಲೂಕಿನ ಸಿದ್ದನಬಾವಿಯ ನಿವಾಸಿ ಉಮಾಕಾಂತ ಗಣೇಶ ವೆಂಗುರ್ಲೇಕರ ಮೃತಪಟ್ಟ ಬೈಕ್ ಸವಾರ.

ಈತನು ಪಟ್ಟಣದ ಮೂರೂರು ಕ್ರಾಸ್ ಬಳಿ ಬೈಕ್ ಮೇಲೆ ರಸ್ತೆ ದಾಟುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಅತಿ ವೇಗದಲ್ಲಿದ್ದ ಟಿಪ್ಪರ್ , ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆಯ ಮೇಲೆ ಬಿದ್ದು ಎದೆಗೆ ಹಾಗೂ ತಲೆಗೆ ಗಂಭೀರ ಗಾಯವಾಗಿತ್ತು, ನಂತರ ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಬೈಕ್ ಸವಾರ ಮೃತಪಟ್ಟಿದ್ದಾನೆ. ಈ ಘಟನೆಗೆ ಸಂಬoಧಿಸಿದoತೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಯೋಗೇಶ್ ಮಡಿವಾಳ ಕುಮಟಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Exit mobile version