ವಂಚನೆ ಪ್ರಕರಣ: 17 ವರ್ಷಗಳಿಂದ ತಲೆ ಮೆರೆಸಿಕೊಂಡಿದ್ದ ಆರೋಪಿಯ ಬಂಧನ

ಕುಮಟಾ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 17 ವರ್ಷಗಳ ಹಿಂದೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಆರೋಪಿ ತಲೆಮರೆಸಿಕೊಂಡು ಪೊಲೀಸರಿಂದ ತಪ್ಪಿಸಿಕೊಂಡಿದ್ದ. ಇದೀಗ ಬರೋಬ್ಬರಿ 17 ವರ್ಷಗಳ ಬಳಿಕ ತುಮಕೂರಿನ ತಿಪಟೂರು ತಾಲ್ಲೂಕಿನ ಹಳ್ಳಿಯೊಂದರಲ್ಲಿ ವಾಸಮಾಡಿಕೊಂಡಿದ್ದ ಆರೋಪಿ, ಹೊನ್ನಾವರ ಕವಲಕ್ಕಿ ಮೂಲದ ಶಂಕರ ಹೆಗಡೆಯನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವಾರಾಜು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬದ್ರಿನಾಥ್ ಹಾಗೂ ಭಟ್ಕಳ ಡಿಎಸ್‌ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ ಸಿಪಿಐ ಶಿವಪ್ರಕಾಶ್ ನಾಯ್ಕ ಅವರ ನೇತೃತ್ವದಲ್ಲಿ ಕುಮಟಾ ಪಿಎಸ್‌ಐ ಆನಂದಮೂರ್ತಿ ಹಾಗೂ ಸಿಬ್ಬಂದಿ ದಯಾನಂದ ನಾಯ್ಕ, ಸಂತೋಷ ಬಾಳೇರ ಅವರ ತಂಡ ಪತ್ತೆ ಮಾಡಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ. ಇದರಿಂದ ದೀರ್ಘ ಕಾಲದಿಂದ ವಿಚಾರಣೆಗೆ ಬಾಕಿ ಇದ್ದ ಪ್ರಕರಣಕ್ಕೆ ಮರು ಜೀವ ಬಂದಂತೆ ಆಗಿದೆ. ಈ ಕಾರ್ಯಕ್ಕೆ ಪಿಎಸ್‌ಐಗಳಾದ ಸುಧಾ ಅಘನಾಶಿನಿ, ತಾಂತ್ರಿಕ ವಿಭಾಗದ ಸಿಬ್ಬಂದಿ ಸುಧೀರ್ ಮಡಿವಾಳ್ ಅವರು ಸಹಾಯ ಮಾಡಿದ್ದಾರೆ. ಉತ್ತಮ ಕಾರ್ಯ ನಿರ್ವಹಿಸಿದ ಎಲ್ಲ ಅಧಿಕಾರಿ, ಸಿಬ್ಬಂದಿಗಳಿಗೆ ಎಸ್‌ಪಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕುಮಟಾ

Exit mobile version