Follow Us On

WhatsApp Group
Big News
Trending

ಲಾರಿಯ ಟೈಯರ್ ಸ್ಫೋಟ: ಸ್ಥಳದಲ್ಲೇ ಸಾವನ್ನಪ್ಪಿದ ಚಾಲಕ: ಒಂದುವರೆಗಂಟೆ ಕಾರ್ಯಾಚರಣೆ ನಡೆಸಿ ಲಾರಿಯಡಿ ಸಿಲುಕಿದ್ದ ಮೃತದೇಹ ಹೊರಕ್ಕೆ

ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಲಾರಿ ಅಡಿಯಲ್ಲಿಯೇ ಸಿಲುಕಿ ಸುಮಾರು ಒಂದು ಘಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ, ಸ್ಥಳೀಯರು ಹರಸಾಹಸ ಪಟ್ಟು ಮೃತದೇಹವನ್ನು ಮೇಲಕ್ಕೆ ಎತ್ತಿದರು.

ಅಂಕೋಲಾ: ಟೈಯರ್ ಸ್ಫೋಟಗೊಂಡ ಪರಿಣಾಮ ರಬ್ಬರ್ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಅಗಸೂರು ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಇನ್ನು ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಲಾರಿ ಅಡಿಯಲ್ಲಿಯೇ ಸಿಲುಕಿ ಸುಮಾರು ಒಂದು ಘಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ, ಸ್ಥಳೀಯರು ಹರಸಾಹಸ ಪಟ್ಟು ಮೃತದೇಹವನ್ನು ಮೇಲಕ್ಕೆ ಎತ್ತಿದರು.

ಕೇರಳದಿಂದ ರಬ್ಬರ್ ತುಂಬಿಕೊಂಡು ಹೊರಟಿದ್ದ ಲಾರಿ ನಾಸಿಕ ತಲುಪಬೇಕಿತ್ತಾದರೂ, ಅಂಕೋಲಾ- ಹುಬ್ಬಳ್ಳಿ ಮಾರ್ಗ ಮಧ್ಯೆ ಅಗಸೂರು ಬಳಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಲಾರಿಯಡಿ ಸಿಲುಕಿದ್ದ ಚಾಲಕನ ಮೃತ ದೇಹವನ್ನುತೆಗೆಯಲು ಹರಸಾಹಸ ಪಡುವಂತಾಯಿತು. ಕ್ರೇನ್ ಮೂಲಕ ಲಾರಿಯ ಒಂದು ಭಾಗ ಸ್ವಲ್ಪ ಮೇಲಕ್ಕೆತ್ತಿ , ಮೃತದೇಹ ಪಕ್ಕಕ್ಕೆ ಸರಿಸಲಾಯಿತು.

ನಂತರ ಮೃತದೇಹದ ಮರಣೋತ್ತರ ಪರೀಕ್ಷೆ ಹಾಗೂ ಸಂರಕ್ಷಣೆ ಉದ್ದೇಶದಿಂದ ಆಸ್ಪತ್ರೆಗೆ ಸಾಗಿಸಲು ಸಾಮಾಜಿಕ ಕಾರ್ಯಕರ್ತ ವಿಜಯ ಕುಮಾರ ನಾಯ್ಕ, ಸಹಾಯಕ ಬೊಮ್ಮಯ್ಯ ನಾಯ್ಕ, ಮತ್ತು ಸ್ಥಳೀಯರು ನೆರವಾದರು. ರಸ್ತೆ ಮಧ್ಯದಲ್ಲಿ ಸಂಭವಿಸಿದ ಈ ಅಪಘಾತದಿಂದ ಎರಡು ಗಂಟೆಗಳಿಗೂ ಅಧಿಕ ಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ವ್ಯತ್ಯಯವಾಯಿತು.

ಲಾರಿಯನ್ನು ರಸ್ತೆಯಿಂದ ತೆರವುಗೊಳಿಸಲು ಕ್ರೇನ್ ಬಳಸಿ ಸಂಚಾರಕ್ಕೆ ಅನುವು ಮಾಡಿಕೊಡಲು ಪೊಲೀಸರೊಂದಿಗೆ ಸ್ಥಳೀಯರು ಸಹಕರಿಸಿದರು. ಸಿಪಿಐ ಕೃಷ್ಣಾನಂದ ನಾಯಕ ಮಾರ್ಗದರ್ಶನದಲ್ಲಿ ಪಿಎಸ್‌ಐ ಪ್ರೇಮನಗೌಡ ಪಾಟೀಲ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888…

Back to top button