21 ಪ್ರಕರಣದಲ್ಲಿ ಬೇಕಾಗಿದ್ದ! 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

ಸಿದ್ದಾಪುರ: ಕಳೆದ 25 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಕಳ್ಳತನ, ಗಲಭೆ ಮತ್ತು ಗಲಾಟೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಒಟ್ಟು 21 ಪ್ರಕರಣಗಳು ದಾಖಲಾಗಿತ್ತು. ಆರೋಪಿ ಕಳೆದ 25 ವರ್ಷಗಳಿಂದ ತಲೆಮರೆಸಿಕೊಂಡು, ಓಡಾಡಿಕೊಂಡಿದ್ದ.

ಬಂಧಿತ ಆರೋಪಿಯನ್ನು ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಗ್ರಾಮದ ನಿವಾಸಿಯಾದ ಕಮಲಾಕರ್ ಕೋಡಿಯಾ ಎಂದು ಗುರುತಿಸಲಾಗಿದೆ. ನ್ಯಾಯಾಲಯದಿಂದ ಜಾಮೀನು ಪಡೆದು ಹೋದವನು ಮರಳಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 25 ವರ್ಷಗಳಿಂದ ತಲೆಮರೆಸಿಕೊಂಡು ಮುಂಬೈ, ಮಂಗಳೂರು, ಸುಳ್ಯ ಸೇರಿದಂತೆ ಹಲವು ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ. ಹಾಲಿ ಕೊಡಗು ಜಿಲ್ಲೆಯ ಪೊನ್ನಪೇಟೆ ತಾಲೂಕಿನ ಶಿವ ಕಾಲನಿಯಲ್ಲಿ ತಲೆಮರೆಸಿಕೊಂಡು ಇದ್ದಾಗ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಸಿದ್ದಾಪುರ

Exit mobile version