ಭಟ್ಕಳ: ಅಕ್ರಮವಾಗಿ ದನ ಸಾಗಿಸುತ್ತಿದ್ದ ಕಾರನ್ನು ಗ್ರಾಮೀಣ ಠಾಣೆಯ ಪೊಲೀಸರು ಪತ್ತೆ ಹಚ್ಚಿ ಆರೋಪಿ ಯನ್ನು ಬಂಧಿಸಿದ ಘಟನೆ ತಾಲೂಕಿನ ಬೆನಂದುರು ಕೋಳಿಕೂಗು ದೇವಸ್ಥಾನದ ಹತ್ತಿರ ನಡೆದಿದೆ. ಆರೋಪಿ ಮಧ್ಯರಾತ್ರಿ ನಂಬರ್ ಪ್ಲೇಟ್ ಇಲ್ಲದ ಬೊಲೆನೋ ಕಾರನಲ್ಲಿ ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೇ ಒಂದು ಜಾನುವಾರನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗ್ರಾಮೀಣ ಠಾಣೆಯ ಪೊಲೀಸರು ಆರೋಪಿ ಸಮೇತ ಒಂದು ಆಕಳು ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ಅಬಿಬಲ್ಲಾ ಅಹಮ್ಮದ್ ಸಾಬ್ ಜಾಲಿ ಎಂದು ತಿಳಿದುಬಂದಿದೆ. ಈ ಕುರಿತು ಗ್ರಾಮೀಣ ಠಾಣೆಯ ಪಿಎಸ್‌ಐ ಭರತಕುಮಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದಾರೆ. ಕರ್ನಾಟಕ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುತ್ತಿರುವಂತೆ ಭಟ್ಕಳ ತಾಲೂಕಿನಲ್ಲಿ ಇದು 4 ನೇ ಪ್ರಕರಣ ದಾಖಲಾಗಿದೆ. ಪೊಲೀಸ್ ಇಲಾಖೆ ಪ್ರಕರಣವನ್ನು ಭಟ್ಕಳ ಉಪವಿಭಾಗಾಧಿಕಾರಿಗಳಿಗೆ ಶಿಪಾರಸ್ಸು ಮಾಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ