Follow Us On

WhatsApp Group
Focus News
Trending

15 ಲಕ್ಷ ಮೌಲ್ಯದ ಅಕ್ರಮ ಮದ್ಯವಶಕ್ಕೆ | ಲಾರಿ ಚಾಲಕ ಪರಾರಿ

ಜೊಯಿಡಾ: ತಾಲೂಕಿನ ಅನಮೊಡ ಅಬಕಾರಿ ತನಿಖಾ ಠಾಣೆಯಲ್ಲಿ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ಮಾಡುವ ಸಮಯದಲ್ಲಿ ಗೋವಾ ಕಡೆಯಿಂದ ಬಂದ ಲಾರಿಯೊಂದರಲ್ಲಿ 691.2 ಲೀಟರ್ ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡುವಾಗ ಪತ್ತೆ ಹಚ್ಚಿ, ಜಪ್ತು ಪಡಿಸಿಕೊಳ್ಳಲಾಗಿದೆ. ಸರಾಯಿ ಮತ್ತು ಲಾರಿಯ ಅಂದಾಜು ಮೌಲ್ಯ ಒಟ್ಟೂ ಸೇರಿ 15 ಲಕ್ಷ ಅಂದಾಜಿಸಲಾಗಿದೆ.

ವಾಹನದ ಚಾಲಕ ಪರಾರಿಯಾಗಿದ್ದು, ಅಬಕಾರಿ ಉಪ ಆಯುಕ್ತರಾದ ವನಜಾಕ್ಷಿ ಎಮ್. ಮತ್ತು ಅಭಕಾರಿ ಉಪ ಅಧಿಕ್ಷಕರಾದ ಸಿ.ಎಸ್.ಪಾಟೀಲ ಇವರ ಮಾರ್ಗದರ್ಶನದಲ್ಲಿ ಅಬಕಾರಿ ಉಪನಿರೀಕ್ಷಕರಾದ ಶ್ರೀಧರ ಮಡಿವಾಳ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ. ಕಾರ್ಯಾಚರಣೆಯ ಸಂದರ್ಭದಲ್ಲಿ ಅಬಕಾರಿ ಸಿಬ್ಬಂದಿಗಳಾದ ಆರ್ ವಿ ಭಟ್ಕಳ ,ಬಾಲಕೃಷ್ಣ ಎಸ್.ಕೆ, ದೀಪಕ ಬಾರಾಮತಿ ಮುಂತಾದವರು ಇದ್ದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಜೋಯ್ಡಾ

Back to top button