Join Our

WhatsApp Group
ಮಾಹಿತಿ
Trending

ಕೋವಿಡ್ ಮಾರ್ಗಸೂಚಿ ಪಾಲಿಸಿ: ಶಿವರಾಮ್ ಹೆಬ್ಬಾರ್

ಯಲ್ಲಾಪುರ: ದೇಶಾದ್ಯಾಂತ ಕೊರೋನಾ ಎರಡನೆಯ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಈ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಮಾಸ್ಕ್ ಹಾಕದೇ ಇರುವವರಿಗೆ ದಂಡ ಹಾಕುವುದು ಸರಿ, ಆದರೆ ದಂಡದ ಹೆಸರಲ್ಲಿ ದಬ್ಬಳಾಕೆ ನಡೆಸುವುದು ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ಅವರು ಪಟ್ಟಣದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಈ ತಿಂಗಳಲ್ಲಿ ಮದುವೆ, ಮುಂಜಿ ಇತ್ಯಾದಿ ಕಾರ್ಯಕ್ರಮಗಳು ಹೆಚ್ಚಿದ್ದು, ಇದನ್ನು ಸರಳವಾಘಿ, ಕೋವಿಡ್ ನಿಯಮ ಅನುಸರಿಸಿ ಆಚರಿಸಬೇಕು. ಯಾವುದೇ ಕಾರಣಕ್ಕೂ ಸರ್ಕಾರ ಲಾಕ್ ಡೌನ್ ಮಾಡುವುದಿಲ್ಲ. ಆದರೆ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ , ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ಜನತೆ ತಮಗೆ ತಾವೇ ನಿರ್ಬಂಧ ಹಾಕಿಕೊಳ್ಳುವ ಮೂಲಕ ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button