ಅಕ್ರಮವಾಗಿ ಇನೋವಾ ಕಾರಿನಲ್ಲಿ ಸಾಗಿಸುತ್ತಿದ್ದ 400ಕೆ.ಜಿ ದನದ ಮಾಂಸ ವಶ: ಇಬ್ಬರು ಆರೋಪಿಗಳ ಬಂಧನ
ಭಟ್ಕಳ: ಅಕ್ರಮವಾಗಿ ದನದ ಮಾಂಸವನ್ನು ಇನೋವಾ ಕಾರಿನಲ್ಲಿ ಸಾಗಿಸುತ್ತಿರುವ ವೇಳೆ ಶಿರಾಲಿ ಚೆಕ್ ಪೋಸ್ಟ್ ನಲ್ಲಿ ಕಾರನ್ನು ಅಡ್ಡಗಟ್ಟಿ ದನದ ಮಾಂಸ ವಶಕ್ಕೆ ಪಡೆದು ಇಬ್ಬರು ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳು ಹಾವೇರಿ ಮೂಲದ ಸಾಧಿಕ ಲೋಹಾರ್ , (34) ಹಾಗೂ ಮೊಹಮ್ಮದ್ ರಿಜ್ವಾನ್ ಮನವಳ್ಳಿ ಎಂದು ತಿಳಿದು ಬಂದಿದೆ.
ಇವರಿಬ್ಬರು ಇನೋವಾ ಕಾರಿನಲ್ಲಿ ಸುಮಾರು 80 ಸಾವಿರ ಮೌಲ್ಯದ 400 ಕೆ.ಜಿ ಆಗುವಷ್ಟು ದನದ ಮಾಂಸವನ್ನು ಮಾರಾಟ ಮಾಡುವ ಉದ್ದೇಶದಿಂದ ಯಾವುದೇ ಪರವಾನಿಗೆ ಇಲ್ಲದೇ ಸಾಗಿಸುತ್ತಿದ್ದರು. ಎಲ್ಲಿಂದಲೋ ಕಳುವು ಮಾಡಿಕೊಂಡು ವಾಹನದಲ್ಲಿ ತುಂಬಿಕೊಂಡು ಸಾಗಾಟ ಮಾಡುತ್ತಿರುವಾಗ ಶಿರಾಲಿ ಚೆಕ್ ಪೋಸ್ಟ್ ನಲ್ಲಿ ಕಾರನ್ನು ಅಡ್ಡಗಟ್ಟಿ ದನದ ಮಾಂಸ ಹಾಗೂ ಆರೋಪಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ . ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ