ಭಟ್ಕಳ: ರಾಜ್ಯಾದ್ಯಂತ ಕೊರೋನ ಎರಡನೆ ಅಲೆ ನಿಯಂತ್ರಣದ ಉದ್ದೇಶದಿಂದ ತಡೆಗಟ್ಟಲು ರಾಜ್ಯ ಸರ್ಕಾರವಾರಾಂತ್ಯದ ಕರ್ಫ್ಯೂ ಜಾರಿ ಮಾಡಿರುವ ಕ್ರಮಕ್ಕೆ ಭಟ್ಕಳ ತಾಲ್ಲೂಕಿನಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗಿದೆ . ಕರ್ಫ್ಯೂ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಜನಜೀವನ ಸ್ತಬ್ಧಗೊಂಡಿದೆ. ವಾಹನ ಸಂಚಾರವೂ ಸಂಫೂರ್ಣ ಬಂದ್ ಆಗಿದ್ದು, ಶನಿವಾರ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಕೆಲವೇ ಕೆಲ ಬಸ್ ಗಳು ಸಂಚಾರ ನಡೆಸುತ್ತಿದ್ದು, ಉಳಿದಂತೆ ಬಹುತೇಕ ಬಸ್ ಗಳು ಡಿಪೋಗಳಿಂದ ಹೊರ ಬಂದಿಲ್ಲ.ತಾಲೂಕಿನ ಪ್ರಮುಖ ರಸ್ತೆಗಳು ಖಾಲಿ ಖಾಲಿಯಾಗಿದ್ದು, ಜನಸಂಚಾರ, ವಾಹನಗಳ ಸಂಚಾರ ಇಲ್ಲದೇ ರಸ್ತೆಗಳು ಬಿಕೋ ಎನ್ನುತ್ತಿವೆ.
ಶನಿವಾರ ಬೆಳಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತುಗಳ ಅಂಗಡಿ ಮುಂಗಟ್ಟುಗಳು ತೆರೆದುಕೊಂಡು ವ್ಯಾಪಾರ ವಹಿವಾಟು ನಡೆಸಿದವು. ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲೂ ಜನಸಂಚಾರ, ವಾಹನ ಸಂಚಾರ ಸ್ತಬ್ಧಗೊಂಡಿದ್ದು, ಆಸ್ಪತ್ರೆ, ಮೆಡಿಕಲ್, ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ನಾಲ್ಕನೇ ಶನಿವಾರವಾಗಿದರಿಂದ ಬ್ಯಾಂಕಗಳು ಕಾರ್ಯನಿರ್ವಹಿಸುತ್ತಿಲ್ಲವಾಗಿದ್ದು ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಪೊಲೀಸರು ಬಂದೋಬಸ್ತ್ ಕರ್ತವ್ಯ ನಿರ್ವಹಿಸುತ್ತಿದ್ದು, ಅನಗತ್ಯವಾಗಿ ಓಡಾಡುವ ಜನರು, ವಾಹನಗಳ ನಿಯಂತ್ರಣಕ್ಕೆ ಮುಂದಾಗಿದ್ದಾರೆ.
ಬಿಕ್ಷುಕರಿಗೆ ಊಟ ನೀಡಿದ ಭಟ್ಕಳ ಕಾರವಳಿ ಹೊಟೇಲ ಮಾಲೀಕ: ವಾರಾಂತ್ಯ ಕರ್ಫ್ಯೂ ಹಿನ್ನೆಲೆ ಎಲ್ಲಾ ಹೊಟೇಲ್ ಗಳು ಬಂದ ಇರುವ ಹಿನ್ನೆಲೆ ತಾಲೂಕಿನಲ್ಲಿರು ಭಿಕ್ಷುಕರಿಗೆ ಭಟ್ಕಳ ಕಾರವಳಿ ಹೊಟೇಲ್ ಮಾಲೀಕರಾದ ತಿಮ್ಮಪ್ಪ ನಾಯ್ಕ ಊಟದ ಊಟ ನೀಡಿ ಮಾನವೀಯತೆ ಮೆರೆದಿದ್ದಾರೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.