ಅಂಕೋಲಾ – ತಾಲೂಕಿನ ನೂತನ ಪ್ರಭಾರಿ ತಹಶೀಲ್ದಾರರಾಗಿ ಮಂಜುಳಾ ಶಂಕರ ಭಜಂತ್ರಿ ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಮೇ 2 ರವರೆಗೆ ಪ್ರಭಾರಿ ಹುದ್ದೆ ನಿರ್ವಹಿಸಲಿದ್ದು,ಹಾಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಹಶೀಲ್ದಾರ ಉದಯ ಕುಂಬಾರ ಕೆಲದಿನಗಳ ಮಟ್ಟಿಗೆ ವೈದ್ಯಕೀಯ ರಜೆ ಮೇಲೆ ತೆರಳಿದ್ದು,,ಅವರ ತೆರವಾದ ಸ್ಥಾನಕ್ಕೆ ಜಿಲ್ಲಾಧಿಕಾರಿಗಳ ಆದೇಶದನ್ವಯ ಮಂಜುಳಾ ಭಜಂತ್ರಿ ಹಾಜರಾಗಿದ್ದಾರೆ.
ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನವರಾದ ಇವರು ಈ ಹಿಂದೆ ಹೊನ್ನಾವರ ಸಿದ್ದಾಪುರ ಮತ್ತು ಸಾಗರ ತಾಲೂಕಿನಲ್ಲಿ ತಹಶೀಲ್ದಾರರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದು.,ಕಳೆದ ಆರು ತಿಂಗಳಿನಿಂದ ಜಿಲ್ಲಾಧಿಕಾರಿಗಳ ಕಾರ್ಯಲಯದಲ್ಲಿ ಚುನಾವಣಾ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕೊವಿಡ್ 2ನೇ ಅಲೆ ನಿಯಂತ್ರಣ ಮತ್ತಿತರ ಆಡಳಿತಾತ್ಮಕ ದೃಷ್ಟಿಯಿಂದ ಪ್ರತೀ ತಾಲೂಕಿನಲ್ಲಿ ತಹಶೀಲ್ದಾರರ ಕರ್ತವ್ಯ ನಿರ್ವಹಣೆ ಜವಾಬ್ದಾರಿ ಹೆಚ್ಚಿರುವುದರಿಂದ ಜಿಲ್ಲಾಧಿಕಾರಿಗಳು ಸೂಕ್ತ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.
ಹಾಗಾಗಿಯೇ ಕರ್ತವ್ಯಕ್ಕೆ ಹಾಜರಾದ ದಿನವೇ, ನೂತನ ತಹಶೀಲ್ದಾರ ಮಂಜುಳಾ ಭಜಂತ್ರಿ, ತಾಲೂಕಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಕೋವಿಡ್ ವ್ಯಾಕ್ಸಿನೇನ್, ಕೊವಿಡ್ ವಾರ್ಡ್, ಮತ್ತಿತರ ಆರೋಗ್ಯ ಸಂಬಂಧಿ ವಿಷಯಗಳ ಕುರಿತು ಸಂಬಂಧಿಸಿದವರಿಂದ ಮಾಹಿತಿ ಪಡೆದು, ಚರ್ಚಿಸಿ, ಸಾರ್ವಜನಿಕರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿ ತಮ್ಮ ಜನಪರ ಕಾಳಜಿ ಪ್ರದರ್ಶಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕಾ ಆಸ್ಪತ್ರೆ ಆಡಳಿತಾಧಿಕಾರಿ ಡಾ. ಮಹೇಂದ್ರ ನಾಯಕ, ತಾಲೂಕಾ ಆರೋಗ್ಯಾಧಿಕಾರಿ ಡಾ ನಿತಿನ್ ಹೊಸ್ಮೇಲಕರ, ಉಪ ತಹಶೀಲ್ದಾರ ಸುರೇಶ ಹರಿಕಂತ್ರ,ಕಂದಾಯ ನಿರೀಕ್ಷಕ ರಾಘವೇಂದ್ರ ಜನ್ನು, ಗ್ರಾಮ ಲೆಕ್ಕಗ ಭಾರ್ಗವ ನಾಯಕ, ಜಿ.ಪಂ. ಮಾಜಿ ಸದಸ್ಯ ವಿನೋದ ನಾಯಕ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ಇತರರು ಹಾಜರಿದ್ದರು.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..