Important
Trending

ಬೈಕ್ ತಪ್ಪಿಸಲು ಹೋಗಿ ಸಿಮೆಂಟ್ ತುಂಬಿದ ಲಾರಿ ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು

ಯಲ್ಲಾಪುರ: ಸಿಮೆಂಟ್ ತುಂಬಿದ ಲಾರಿಯೊಂದು ಪಲ್ಟಿಯಾಗಿ ಲಾರಿ ಚಾಲಕ ಮೃತಪಟ್ಟ ಘಟನೆ ಅರಬೈಲ್ ಘಟ್ಟದಲ್ಲಿ ನಡೆದಿದೆ. ಎದುರಿನಿಂದ ಬರುತ್ತಿದ್ದ ಬೈಕ್ ತಪ್ಪಿಸಲು ಹೋದ ಲಾರಿ ಚಾಲಕ, ಮೊದಲು ವಿದ್ಯುತ್ ಕಂಬಕ್ಕೆ ಗುದ್ದಿದ್ದಾನೆ. ಬಳಿಕ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಲಾರಿ ಬಡಿದು ಬೈಕ್ ಸವಾರನಿಗೂ ಗಾಯವಾಗಿದ್ದು, ತಾಲೂಕಾಸ್ಪತ್ರೆಗೆ ಸೇರಿಸಲಾಗಿದೆ..

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button