ಹೊರಗಡೆಯಿಂದ ಬಂದವರು ಕ್ವಾರಂಟೈನ್ ಆಗಿ: ಕಾರಣ ಇಲ್ಲದೆ ಓಡಾಡಿದ್ರೆ ಕೇಸ್: ನಗರ, ಪಟ್ಟಣ ಪ್ರದೇಶದಲ್ಲಿ ಚೆಕ್ ಪೋಸ್ಟ್

ಕಾರವಾರ: ಸರ್ಕಾರ ಕೊರೊನಾ ನಿಯಂತ್ರಣ ಸಂಬoಧ 14 ದಿನಗಳ ಕಾಲ ವಿಧಿಸಿರುವ ಕರೊನಾ ಕರ್ಪ್ಯೂ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ಕಾರಣವಿಲ್ಲದೆ ಅನಗತ್ಯವಾಗಿ ಯಾರೇ ಓಡಾಡಿದರು ಕೂಡ ಅಂತವ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಎಚ್ಚರಿಸಿದ್ದಾರೆ. ನಗರ ಪ್ರದೇಶಗಳನ್ನು ಪ್ರವೇಶಿಸುವ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಹಾಕಿ ಪೆಟ್ರೋಲಿಂಗ್ ಮಾಡಲಾಗುತ್ತದೆ. ಮೆಡಿಕಲ್ ಸಿಬ್ಬಂದಿ, ಗುರುತಿಸಿದ ಸರ್ಕಾರಿ ಸಿಬ್ಬಂದಿ, ಅನಾರೋಗ್ಯ ಸಂಬoಧ ಆಸ್ಪತ್ರೆಗೆ ತೆರಳುವವರು ಸೇರಿದಂತೆ ಅಗತ್ಯ ಇದ್ದವರು ಮಾತ್ರ ಸೂಕ್ತ ಕಾರಣ ಇಲ್ಲವೇ ಪಾಸ್, ಗುರುತಿನಿ ಚೀಟಿ ಇದ್ದವರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದರು.

ಬೆಂಗಳೂರು ಸೇರಿದಂತೆ ಇತರೆ ಭಾಗಗಳಿಂದ ಬಂದವರ ಮೇಲೆ ಆಯಾ ಸ್ಥಳೀಯ ಸಂಸ್ಥೆಗಳ ಮೂಲಕ ನಿಗಾ ಇಡಲು ಈಗಾಗಲೇ ಸೂಚಿಸಲಾಗಿದೆ. ಹೊರಗಡೆಯಿಂದ ಬಂದವರು ಸ್ವಯಂ ಪ್ರೇರಿತರಾಗಿ ಕ್ವಾರಂಟೈನ್ ಆಗಬೇಕು. ಆ ಮೂಲಕ ಕೋವಿಡ್ ತಡೆಗಟ್ಟಲು ಎಲ್ಲರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕಾರವಾರ

Exit mobile version