ಉತ್ತರಕನ್ನಡದಲ್ಲಿ 15 ಮಂದಿ ಸಾವು: ಇದುವರೆಗಿನ ಗರಿಷ್ಠ ದಾಖಲೆ: ಜಿಲ್ಲೆಯಲ್ಲಿ ಗುರುವಾರ 849 ಕೋವಿಡ್ ಕೇಸ್
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಗುರುವಾರ ಒಟ್ಟು 849 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಆತಂಕಕಾರಿ ಬೆಳವಣಿಗೆ ಅಂದರೆ ಸಾವಿನ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡಿದೆ. ಹೌದು, ಗುರುವಾರ ಒಂದೇ ದಿನ ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ 15 ಮಂದಿ ಸಾವನ್ನಪ್ಪಿರುವುದು, ಹಿಂದಿನ ವರ್ಷದಿಂದ ಈವರೆಗಿನ ಅತಿಹೆಚ್ಚಿನ ಪ್ರಮಾಣದಲ್ಲಿ ದಾಖಲಾದ ಸಾವಾಗಿದೆ.
ಇನ್ನೊಂದೆಡೆ, ಜಿಲ್ಲೆಯಲ್ಲೂ ಆಕ್ಸಿಜನ್ ಸಂಗ್ರಹ ದಿನೇ ದಿನೇ ಇಳಿಕೆಯಾಗುತ್ತಿದೆ. ಇಡೀ ಜಿಲ್ಲೆಗೆ ಆಕ್ಸಿಜನ್ ಸಂಗ್ರಹಿಸುತ್ತಿದ್ದ ಕುಮಟಾದ ಬೆಟ್ಕುಳಿ ಘಟಕದಲ್ಲಿ ಆಕ್ಸಿಜನ್ ಸಂಗ್ರಹ ಕಡಿಮೆಯಾಗುತ್ತಿದೆ.ರಾಜ್ಯದಲ್ಲಿಯೇ ಅತಿದೊಡ್ಡ ಜಿಲ್ಲೆಗಳಲ್ಲಿ ಒಂದಾದ ಉತ್ತರ ಕನ್ನಡದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ನಿರೀಕ್ಷೆಗೂ ಮೀರಿ ಹೆಚ್ಚಾಗತೊಡಗಿದೆ.
ಪ್ರತಿನಿತ್ಯ 800ಕ್ಕೂ ಅಧಿಕ ಸೋಂಕಿತರು ಪತ್ತೆಯಾಗುತ್ತಿದ್ದು, ಜಿಲ್ಲೆಯಲ್ಲಿ ಇರುವ ಏಕೈಕ ಮೆಡಿಕಲ್ ಕಾಲೇಜಿನ ಅತಿದೊಡ್ಡ ಕೋವಿಡ್ ಆಸ್ಪತ್ರೆಯ ಐಸಿಯು ಭರ್ತಿಯಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹೊರತುಪಡಿಸಿ ಬೇರೆ ಯಾವುದೇ ಖಾಸಗಿ ಅಥವಾ ಸರ್ಕಾರಿ ದೊಡ್ಡ ಮಟ್ಟದ ಆಸ್ಪತ್ರೆಗಳು ಹೆಚ್ಚಿನ ಕೋವಿಡ್ ಚಿಕಿತ್ಸೆ ಇಲ್ಲದಿರುವುದು ಜಿಲ್ಲಾಡಳಿತಕ್ಕೆ ಸವಾಲಾಗಿದೆ.
ಇದೇ ವೇಳೆ ಜಿಲ್ಲಾ ಕೇಂದ್ರವಾದ ಕಾರವಾರದ ಕಿಮ್ಸ್ ಚಿಕಿತ್ಸಾ ವಾರ್ಡ್ನಲ್ಲಿ ಎಲ್ಲಾ ಐಸಿಯು ಬೆಡ್‌ಗಳು ಭರ್ತಿಯಾಗಿವೆ. ಕಳೆದ ಒಂದು ವಾರದಿಂದ ಸರಿಸುಮಾರು 800 ಕೋವಿಡ್ ಕೇಸ್ಗಳು ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ. ಸಾರ್ವಜನಿಕರು ಜಾಗೃತರಾಗಿ ಕೋವಿಡ್ ನಿಮಯ ಪಾಲಿಸಿ, ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದರೂ ಸದ್ಯದ ಮಟ್ಟಿಗೆ ಆಕ್ಸಿಜನ್ ಕೊರತೆ ಇಲ್ಲ. ಪ್ರತಿನಿತ್ಯ ಬೇಡಿಕೆ ಇರುವ ಪ್ರಮಾಣದಲ್ಲಿಯೇ ಪೂರೈಕೆ ಇದ್ದು ಆಕ್ಸಿಜನ್ ಸಮಸ್ಯೆ ತಲೆದೂರದಂತೆ ಕ್ರಮಕೈಗೊಂಡಿರುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಾಹಿತಿ ನೀಡಿದ್ದಾರೆ.
ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡಿರುವ ಅವರು, ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ಆಕ್ಸಿಜನ್ ರಿಫಿಲಿಂಗ್ ಪ್ಲಾಂಟ್ ಇದೆ. ಅದರ ಮೂಲಕವೇ ಕಾರವಾರದ ಮೆಡಿಕಲ್ ಕಾಲೇಜು ಆಸ್ಪತ್ರೆ ಸೇರಿದಂತೆ ಎಲ್ಲಾ ಆಸ್ಪತ್ರೆಗಳಿಗೂ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದೆ.
ಈ ಹಿಂದೆ ಕೇವಲ ಮೂರು ಕಿ.ಲೋ ಲೀಟರ್ ಆಕ್ಸಿಜನ್ ಸಾಕಾಗುತಿತ್ತು. ಆದರೆ ಇದೀಗ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಪ್ರತಿನಿತ್ಯ ಸುಮಾರು ನಾಲ್ಕೂವರೆ ಕಿಲೋ ಲೀಟರ್ ಬೇಡಿಕೆ ಇದೆ. ಆದರೆ ಕುಮಟಾದಲ್ಲಿ ಪ್ಲಾಂಟ್ ನಲ್ಲಿ 13 ಕಿಲೋಮೀಟರ್ ಸಾಮರ್ಥ್ಯದ ಟ್ಯಾಂಕ್ ಇದೆ. ಇದರಿಂದ ಇಲ್ಲಿ ರಿಫಿಲ್ಲಿಂಗ್ ಆಗಿ ಅಷ್ಟೆ ಪ್ರಮಾಣದ ಪೂರೈಕೆ ಇದೆ ಎಂದರು..
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..
ವಿಸ್ಮಯ ನ್ಯೂಸ್, ಕಾರವಾರ