ಉಸಿರಾಟದ ಸಮಸ್ಯೆಯಿದೆ:ದಯವಿಟ್ಟು ಬೆಡ್ ನೀಡಿ: ಚಿಕಿತ್ಸೆಗಾಗಿ ಪರದಾಡಿದ ಸೋಂಕಿತ

ಕಾರವಾರ: ಕರೊನಾ ಸೋಂಕು ಎಲ್ಲೆಡೆ ತನ್ನ ಕಬಂಧ ಬಾಹು ಚಾಚಿದ್ದು, ಇದುವರೆಗೆ ಮೆಟ್ರೊ ಸಿಟಿಗಳಲ್ಲಿ ಮಾತ್ರ ಬೆಡ್‌ಗಳ ತೀವ್ರ ಕೊರತೆ ಕಾಡುತ್ತಿತ್ತು. ಇದೀಗ, ಜಿಲ್ಲಾಕೇಂದ್ರ, ತಾಲೂಕು ಕೇಂದ್ರಗಳಲ್ಲಿ ಬೆಡ್‌ಗಳು ಫುಲ್ ಆಗುತ್ತಿದೆ. ಇದರ ಪರಿಣಾಮ ಸೋಂಕಿತರು ಚಿಕಿತ್ಸೆಗಾಗಿ ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ.

ಕೊರೊನಾ ಸೋಂಕಿನಿoದ ಬಳಲುತ್ತಿರುವ ವ್ಯಕ್ತಿಯೋರ್ವ ಆಸ್ಪತ್ರೆಗೆ ಸೇರಲು ಒಂದುಗoಟೆಗಳ ಕಾಲ ಪರದಾಡಿದ ಘಟನೆ ಕಾರವಾರದ ಕ್ರೀಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಕೊವಿಡ್ ಪರೀಕ್ಷೆ ಬಳಿಕ ವ್ಯಕ್ತಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದ್ದು ವ್ಯಕ್ತಿ ಆಸ್ಪತ್ರೆಗೆ ದಾಖಲಾಗಲು ನಗರದ ಕೊವಿಡ್ ಆಸ್ಪತ್ರೆಗೆ ಆಗಮಿಸಿದ್ದ.

ಆದರೆ ಗಂಟೆಯಿoದ ಕಾಯುತ್ತಿದ್ದರೂ ಕೂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದ ಕಾರಣ ವ್ಯಕ್ತಿ ಉಸಿರಾಟದ ಸಮಸ್ಯೆಯಿಂದ ಒದ್ದಾಡುವ ಸ್ಥಿತಿ ನಿರ್ಮಾಣವಾಗಿತ್ತು ಎನ್ನಲಾಗಿದೆ. ಕೂಡಲೇ ಹೇಗಾದರೂ ನನ್ನನ್ನು ಆಸ್ಪತ್ರೆಗೆ ಸೇರಿಸುವಂತೆ ಸೋಂಕಿತ ಮನವಿ ಮಾಡಿಕೊಂಡಿದ್ದ. ಈ ವೇಳೆ ಮಾಹಿತಿ ತಿಳಿದ ಜಿಲ್ಲಾಧಿಕಾರಿಗಳು, ಬೆಡ ವ್ಯವಸ್ಥೆ ಮಾಡಿದ್ದಾರೆ ಎಂಬ ಮಾಹಿತಿ ಲಭಿಸಿದೆ..

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕಾರವಾರ

Exit mobile version