ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತೆಗೆ ಮಹಿಳೆಯೋರ್ವಳಿಗೆ ಯಶಸ್ವಿ ಹೆರಿಗೆ ಮಾಡಿಸಿರುವ ಘಟನೆ ನಡೆದಿದೆ.
ಹೌದು, ಕೊರೊನಾ ಸೋಂಕಿತ ಗರ್ಭಿಣಿಗೆ ಭಟ್ಕಳ ತಾಲೂಕಾಸ್ಪತ್ರೆಯ ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿದ್ದು ತಾಯಿ ಮತ್ತು ಮಗು ಇಬ್ಬರು ಸುರಕ್ಷಿತವಾಗಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
ಭಟ್ಕಳ ಪಟ್ಟಣದ ಚೌಥನಿಯ ನಿವಾಸಿಯಾದ ಗರ್ಭಿಣಿ ಮಹಿಳೆಯೊರ್ವರಿಗೆ ತಪಾಸಣೆ ನಡೆಸಿದ್ದು ಕೋವಿಡ್ ಸೋಂಕು ಪತ್ತೆಯಾಗಿತ್ತು. ಮಹಿಳೆ ಪರಿಸ್ಥಿತಿ ಗಂಭೀರವಾಗಿದ್ದು ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸುವುದು ಅನಿವಾರ್ಯವಾಗಿತ್ತು. ಇದನ್ನು ಅರಿತ ಡಾ. ಶಮ್ಸನೂರ್ ಮಹಿಳೆಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ.
ಡಾ. ಸವಿತಾ ಕಾಮತ ಅರವಳಿಕೆ ನೀಡಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರು. ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ತಾಯಿ ಮತ್ತು ಮಗು ಇಬ್ಬರು ಸುರಕ್ಷಿತವಾಗಿದ್ದಾರೆ. ಈ ಸಂದರ್ಭದಲ್ಲಿ ಶ್ರುಶೂಶಕಿಯರಾದ ರೇಖಾ ಮತ್ತು ಶಶಿಕಲಾ ಸಹಕರಿಸಿದ್ದರು.
ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.