ರಾಜ್ಯದಲ್ಲೇ ಅತೀ ವೇಗವಾಗಿ ಕೋವಿಡ್ ಸೊಂಕು ಹರಡುತ್ತಿರುವ ಜಿಲ್ಲೆಯಾಗಿ ಉತ್ತರ ಕನ್ನಡ: ಕೇಂದ್ರದ ವರದಿಯಲ್ಲಿ ಏನಿದೆ ನೋಡಿ?

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೊಂಕು ಹರಡುವಿಕೆ ದಿನದಿಂದ ದಿನಕ್ಕೆ ವೇಗ ಪಡೆಯುತ್ತಿದೆ. ಹಳ್ಳಿ ಹಳ್ಳಿಗೂ ಸೊಂಕು ವ್ಯಾಪಿಸುತ್ತಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ರಾಜ್ಯದಲ್ಲಿ ಅತೀ ವೇಗವಾಗಿ ಕೋವಿಡ್ ಸೊಂಕು ಹರಡುತ್ತಿರುವ ಜಿಲ್ಲೆಯಲ್ಲಿ ಉತ್ತರ ಕನ್ನಡ ಅಗ್ರಸ್ಥಾನಕ್ಕೆ ಏರಿದೆ. ಮೇ 5ರಿಂದ 11ರವರೆಗೆ ದೇಶದಲ್ಲಿ ಅತ್ಯಂತ ವೇಗವಾಗಿ ಕೋವಿಡ್ ಹರಡಿದ ಜಿಲ್ಲೆಗಳ ಪಟ್ಟಿಯನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದು, ಉತ್ತರ ಕನ್ನಡ ರಾಜ್ಯದಲ್ಲೇ ಪ್ರಥಮಸ್ಥಾನಕ್ಕೆ‌ ಏರಿದೆ.

ಇಡೀ ದೇಶದ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.21 ರಷ್ಟಿದೆ. ಆದರೆ, ಉತ್ತರ ಕನ್ನಡ ಜಿಲ್ಲೆಯ ಪಾಸಿಟಿವಿಸಿ ಪ್ರಮಾಣ ಶೇ.46.6ರಷ್ಟಿದೆ ಎಂಬ ಮಾಹಿತಿ ಹೊರಬಿದ್ದಿದೆ. ಜಿಲ್ಲೆಯಲ್ಲಿ ಪ್ರತಿದಿನ ಸುಮಾರು 1700 ಟೆಸ್ಟ್ ನಡೆಸಲಾಗುತ್ತಿದ್ದು, 800ರಿಂದ 900 ಜನರಲ್ಲಿ ಸೋಂಕು ಪತ್ತೆಯಾಗುತ್ತಿದೆ. ಈ ಬೆಳವಣಿಗೆ ಇದೀಗ ಆತಂಕಕ್ಕೆ ಕಾರಣವಾಗಿದೆ.


ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್, ಕಾರವಾರ

Exit mobile version