Follow Us On

WhatsApp Group
Focus News
Trending

ಮೇ 15 ಮತ್ತು 16 ರಂದು ಜಿಲ್ಲೆಯಲ್ಲಿ ಭಾರೀ ಗಾಳಿ-ಮಳೆ: ಜಿಲ್ಲಾಧಿಕಾರಿಗಳ: ಕಾರ್ಯಾಲಯದ ಪ್ರಕಟಣೆ: 70-80 ಕಿ.ಮೀ ವೇಗ ಪಡೆದುಕೊಳ್ಳಲಿರುವ ಗಾಳಿ : 120 – 200 ಮಿ.ಮೀ ಮಳೆ ಸಾಧ್ಯತೆ !?

ಕಾರವಾರ: ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ   ಉತ್ತರ ಕನ್ನಡ ಜಿಲ್ಲೆಯಲ್ಲಿಯೂ  ಮೇ 15 ಮತ್ತು 16 ರಂದು ಎರಡು ದಿನಗಳ ಕಾಲ ಭಾರೀ  ಪ್ರಮಾಣದ ಗಾಳಿ – ಮಳೆಯಾಗುವ  ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (I. M.D) ನೀಡಿದ್ದು, ಈ ಕುರಿತು ಜನತೆ ಜಾಗ್ರತರಾಗಿರುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.                           

ಕುರಿತು ಅಪರ ಜಿಲ್ಲಾಧಿಕಾರಿ ಹೆಚ್. ಕೆ.ಕೃಷ್ಣಮೂರ್ತಿ ಜಿಲ್ಲೆಯ ಜನತೆಯ ಹಿತದೃಷ್ಟಿಯಿಂದ ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.ಹವಾಮಾನ ಇಲಾಖೆ ಮುನ್ಸೂಚನೆಯಂತೆ ಗಾಳಿಯು 70 ರಿಂದ 80 ಕಿ.ಮೀ ವೇಗದಲ್ಲಿ ಬೀಸುವ ಹಾಗೂ, 120ರಿಂದ 200 ಮಿ.ಮೀ ಮಳೆಯಾಗುವ ಸಾಧ್ಯತೆಯಿದ್ದು,

Israel rain view to street through rain-specked window

ಈ ವೇಳೆಯಲ್ಲಿ ಜಿಲ್ಲೆಯ ಯಾವುದೇ ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಮತ್ತು ಎಲ್ಲಾ ಮೀನುಗಾರರು  ಸಹಿತ ಇತರೇ  ಸಾರ್ವಜನಿಕರೂ  ಸಹ ಸಮುದ್ರದ ಕಡೆಗೆ ಬರದಂತೆ ಎಚ್ಚರಿಸಿದ್ದಾರೆ. ಹಾಗೂ ಗಾಳಿ ಮಳೆಯಿಂದ ಉಂಟಾಗುವ ಹಾನಿ ತಪ್ಪಿಸಲು ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದವರಿಗೆ  ಸೂಚಿಸಿದ್ದಾರೆ. 

ಇದೇ ವೇಳೆ ವಿಶೇಷ ಸೂಚನೆ ಹೊರಡಿಸಲಾಗಿದ್ದು, ಗಾಳಿ ಮಳೆ ಬರುವ ಸಂದರ್ಭದಲ್ಲಿ ಜೀವ ಹಾನಿಯಾಗುವ ಸಂದರ್ಭ  ಇರುವುದರಿಂದ, ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಕೆಳಗೆ ಹಾಗೂ ಅವುಗಳ ಹತ್ತಿರ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ತಿಳಿಸಲಾಗಿದೆ.     

ತುರ್ತು ಸಂದರ್ಭಗಳಲ್ಲಿ ಕಂಟ್ರೋಲ್ ರೂಮ್ 24×7ಸಹಾಯವಾಣಿ ಸಂಖ್ಯೆ  *1077 *ಅಥವಾ ವಾಟ್ಸಪ್ ನಂ *9483511015* ಕ್ಕೆ ಸಂಪರ್ಕಿಸ ಬಹುದಾಗಿದೆ ಎಂದು ಎಡಿಸಿ, ಪತ್ರಿಕಾ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.         

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button