ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರದ ರೀತಿಯಲ್ಲಿ ಹೆಚ್ಚುತ್ತಿದೆ. ಹೀಗಾಗಿ ಮತ್ತಷ್ಟು ಕಠಿಣ ಕಾನೂನು ಕ್ರಮ ಅನಿವಾರ್ಯ ಎಂಬ ಕೂಗು ಕೇಳಿಬಂದಿತ್ತು. ಈ ಮಧ್ಯೆ ಮೇ 16 ರ ಬೆಳಿಗ್ಗೆ 10 ರಿಂದಲೇ ಹಲವು ಕಟ್ಟುನಿಟ್ಟಿನ ನಿಯಮಗಳು ಜಾರಿಯಾಗಲಿದೆ. ಈ ಸಂಬoಧ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಮಾಹಿತಿ ನೀಡಿದ್ದಾರೆ.
ಮದುವೆ ಸಮಾರಂಭಗಳಿಗೆ ಬ್ರೇಕ್ ಬಿದ್ದಿದೆ. ಹೊಸದಾಗಿ ಮದುವೆ ಆಯೋಜಿಸಲು ಸಲ್ಲಿಕೆಯಾಗುವ ಅರ್ಜಿಗಳಿಗೆ ಅನುಮತಿ ನಿರಾಕರಿಸಲಾಗಿದೆ. ಈ ಮೊದಲು ಅನುಮತಿ ನೀಡಲಾಗಿರುವ ಮದುವೆಗಳಲ್ಲಿ 40 ಜನರ ಬದಲು ಕೇವಲ 20 ಜನ ಭಾಗವಹಿಸಬಹುದು.
ಅಲ್ಲದೆ, 20 ಕ್ಕಿಂತ ಹೆಚ್ಚು ಜನ ಮದುವೆಗೆ ಸೇರಿಲ್ಲ ಎಂಬುದನ್ನು ಸಂಬoಧಪಟ್ಟ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕಿದೆ. ಸ್ಥಳಕ್ಕೆ ಭೇಟಿ ನೀಡಿ ವೀಡಿಯೋ ಚಿತ್ರೀಕರಣ ಮಾಡಿಕೊಳ್ಳಬೇಕಿದೆ.
ಕರ್ಫ್ಯೂ ಸಮಯದಲ್ಲಿ ಎಲ್ಲ ವಾಹನಗಳ ಸಂಚಾರವನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಖಾಸಗಿ ಮತ್ತು ಸರ್ಕಾರಿ, ಎರಡೂ ವಿಭಾಗಗಳ ವಾಹನಗಳ ಸಂಚಾರ ನಿಷೇಧಿಸಲಾಗಿದ್ದು, ಅಧಿಕೃತ ಗುರುತಿನ ಚೀಟಿ ಹೊಂದಿರುವ ಸರ್ಕಾರಿ ನೌಕರರನ್ನು ಹೊರತು ಪಡಿಸಿ ಉಳಿದ ಎಲ್ಲರಿಗೂ ಇದು ಅನ್ವಯವಾಗುತ್ತದೆ. ಆದರೆ, ವೈದ್ಯಕೀಯ ತುರ್ತು ಸೇವೆಗಳಿಗೆ ಯಾವುದೇ ಅಡ್ಡಿಯಿಲ್ಲ ಎಂದು ಸಚಿವ ಹೆಬ್ಬರ್ ತಿಳಿಸಿದ್ದಾರೆ.
ಒಂದೆಡೆ 40ಕ್ಕಿಂತ ಹೆಚ್ಚು ಕೋವಿಡ್ ಸಕ್ರೀಯ ಪ್ರಕರಣಗಳಿದ್ದರೆ, ಅದನ್ನು ವಿಶೇಷ ಕಂಟೈನ್‌ಮೆoಟ್ ಪ್ರದೇಶವೆಂದು ಗುರುತಿಸಬೇಕು. ಆ ಮೂಲಕ ಸೋಂಕಿನ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಒಟ್ನಲ್ಲಿ ಹೆಚ್ಚುತ್ತಿರುವ ಕೋವಿಡ್ ನಿಯಂತ್ರಿಸಲು ಉಸ್ತುವಾರಿ ಸಚಿವರು ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..
ವಿಸ್ಮಯ ನ್ಯೂಸ್, ಕಾರವಾರ