ಆಂಬುಲೆನ್ಸ್ ಗೆ ಗುದ್ದಿದ ಟ್ಯಾಂಕರ್: ರೋಗಿ ಸ್ಥಳದಲ್ಲೇ ಸಾವು: ಟ್ಯಾಂಕರ್ ಚಾಲಕ ಪರಾರಿ : ಮೂವರಿಗೆ ಗಾಯ
ಕಾರವಾರ: ಅಂಬುಲೇನ್ಸ್ ಮತ್ತು ಟ್ಯಾಂಕರ್ ನಡುವೆ ಡಿಕ್ಕಿಯಾಗಿ ಅಂಬುಲೇನ್ಸ್ ನಲ್ಲಿದ್ದ ರೋಗಿ ಸಾವನ್ನಪ್ಪಿ ಮೂವರು ಗಾಯಗೊಂಡಿರುವ ಘಟನೆ ಹೊನ್ನಾವರ ತಾಲ್ಲೂಕಿನ ರಾಮತೀರ್ಥ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಪೀಡ್ಸ್ ನಿಂದ ಬಳಲುತ್ತಿದ್ದ ಗೋಕರ್ಣದ ರಾಮಕೃಷ್ಣ ಪ್ರಸಾದ ಎಂಬುವವರನ್ನು ಹೊನ್ನಾವರದ ಖಾಸಗಿ ಆಸ್ಪತ್ರೆಯೊಂದಕ್ಕೆ ಸಾಗಿಸುತ್ತಿದ್ದಾಗ ಮಂಗಳೂರಿನಿಂದ ಕುಮಟಾ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿಯೊಂದು ಅತಿ ವೇಗವಾಗಿ ಬಂದು ಅಂಬುಲೇನ್ಸ್ ಗೆ ಗುದ್ದಿದ ಪರಿಣಾಮ ರಾಮಕೃಷ್ಣ ಗಣಪತಿ ಪ್ರಸಾದ (70) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಕುಮಟಾದ ಅಂಬುಲೇನ್ಸ್ ಚಾಲಕ ಜಾನು ದತ್ತಾ ನಾಯ್ಕ, ರೋಗಿ ಜೊತೆಗಿದ್ದ ಬಾಲಚಂದ್ರ ಗಣಪತಿ ಪ್ರಸಾದ್ ಹಾಗೂ ಸುಮನಾ ಗೌಡ ಗಾಯಗೊಂಡಿದ್ದಾರೆ. ಘಟನೆ ಬಳಿಕ ಟ್ಯಾಂಕರ್ ಚಾಲಕ ಪರಾರಿಯಾಗಿದ್ದು, ಅಪಘಾತ ಸ್ಥಳದಿಂದ ಅಪಘಾತಕ್ಕೀಡಾದ ವಾಹನಗಳನ್ನು ಸ್ಥಳಾಂತರಿಸಿ ರಸ್ತೆ ಸಂಚಾರ ಸುಗಮಗೊಳಿಸಲಾಗಿದೆ. ಟ್ಯಾಂಕರ್ ಲಾರಿ ಚಾಲಕನ ವಿರುದ್ದ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ನು ಉಳದ ಮೃತ ವ್ಯಕ್ತಿಯ ಸೋದರ ಮತ್ತು ಸಂಭಂದಿ ಮಹಿಳೆಗೆ ಸಣ್ಣಪುಟ್ಟ ಗಾಯಗೋಂಡಿದ್ದು ಪ್ರಾಣಾಪಯಾದಿಂದ ಪಾರಾಗಿದ್ದು ,ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..
ವಿಸ್ಮಯ ನ್ಯೂಸ್ ಹೊನ್ನಾವರ