Focus News
Trending

ಉತ್ತರಕನ್ನಡದಲ್ಲಿ ಸಂಪೂರ್ಣ ಲಾಕ್ಡೌನ್; ಪೊಲೀಸರಿಗೆ ತಲೆನೋವಾದ ನೌಕಾನೆಲೆ ಸಿಬ್ಬಂದಿ! ಯಾಕೆ ಗೊತ್ತಾ?

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪರಿಣಾಮ ಕಾರವಾರ ನಗರದಲ್ಲಿ ಜನ ಸಂಚಾರ ಸ್ಥಗೀತಗೊಂಡಿದೆಯಾದರೂ ನೌಕಾನೆಲೆಗೆ ತೆರಳುವ ಸಾವಿರಾರು ಸಿಬ್ಬಂದಿ ಹಾಗೂ ವಾಹನಗಳೇ ಪೊಲೀಸರಿಗೆ ದೊಡ್ಡ ತಲೆನೋವಾಗಿದೆ.

ಉತ್ತರಕನ್ನಡ ಜಿಲ್ಲೆಯಾದ್ಯಂತ ಪ್ರತಿನಿತ್ಯ ಸಾವಿರ ಗಡಿಯಲ್ಲಿ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಇದ್ದ ಅವಕಾಶವನ್ನು ಬಂದ್ ಮಾಡಿದ್ದು ಅಗತ್ಯ ವಸ್ತುಗಳನ್ನು ಮನೆಬಾಗಿಲಿಗೆ ಕಳುಹಿಸಲಾಗುತ್ತಿದೆ. ಜಿಲ್ಲೆಯಾದ್ಯಂತ ಕ್ರಮ ಜಾರಿಗೊಳಿಸಲಾಗಿದ್ದು ಪೊಲೀಸರು ಎಲ್ಲೆಡೆ ಚೆಕ್ ಪೋಸ್ಟ್ ಹಾಕಿ ಅನಗತ್ಯ ಓಡಾಡುವವರ ಮೇಲೆ ನಿಗಾ ಇಟ್ಟಿದ್ದಾರೆ.

ಇನ್ನು ಕಾರವಾರದಲ್ಲಿಯೂ ಕೂಡ ಸಂಪೂರ್ಣ ಲಾಕ್ಡೌನ್ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಜನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಆದರೆ ಕಾರವಾರದ ಅರಗಾದಲ್ಲಿರುವ ಸೀಬರ್ಡ್ ನೌಕಾನೆಲೆ ನಗರದಿಂದ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಮಂದಿ ನೂರಾರು ವಾಹನಗಳ ಮೂಲಕ ಓಡಾಟ ನಡೆಸುತ್ತಿರುವುದು ಪೊಲೀಸರಿಗೆ ದೊಡ್ಡ ತಲೆನೋವಾಗಿದೆ.

ಯಾರನ್ನೆ ಕೇಳಿದ್ರು ಸೀಬರ್ಡ್ ಕೆಲಸಕ್ಕೆಂದು ತೆರಳುವವರೇ ಹೆಚ್ಚಾಗಿದ್ದಾರೆ. ಅಲ್ಲದೆ ಟೆಂಪೊ, ಜೀಪುಗಳ ಮೂಲಕ ನಿಗದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು ಸಿಬ್ಬಂದಿಯನ್ನು ಕೊಂಡೊಯ್ಯುತ್ತಿದ್ದಾರೆ.

ಲಾಕ್ಡೌನ್ ಬಂದೋಬಸ್ತ್ ನಲ್ಲಿದ್ದ ಡಿವೈಎಸ್ಪಿ ಅರವಿಂದ ಕಲಗುಜ್ಜಿ, ಸಿಪಿಐ ಸಂತೋಷ ಶೆಟ್ಟಿ, ಪಿಎಸ್ಐಗಳಾದ ಸಂತೋಷ್ ಕುಮಾರ್, ರೇವಣ್ಣ ಸಿದ್ದಪ್ಪ, ನಾಗಪ್ಪ ನಗರದ ವಿವಿಧೆಡೆ ತಪಾಸಣೆ ನಡೆಸಿ ಹೆಚ್ಚಿನ ಜನರನ್ನು ತುಂಬಿಕೊಂಡು ತೆರಳುತ್ತಿದ್ದ ಕೆಲ ಟೆಂಪೋಗಳ ಮೇಲೆ ದಂಡ ಹಾಕಿ ಇನ್ನು ಕೆಲ ವಾಹನಗಳಿಂದ ಸಿಬ್ಬಂದಿ ಇಳಿಸಿ ನಿಗದಿಪಡಿಸಿದಷ್ಟು ಸಿಬ್ಬಂದಿಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನಿಡಿ ಬಿಸಿ ಮುಟ್ಟಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Back to top button