ವಾರದಲ್ಲಿ ಎರಡು ದಿನ ಮಾತ್ರ ಅಗತ್ಯವಸ್ತು ಖರೀದಿಗೆ ಅವಕಾಶ: ನಾಳೆಯಿಂದ ಮನೆಯಿಂದ ಹೊರ ಬರುವ ಮುನ್ನ ಎಚ್ಚರ ಎಚ್ಚರ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ.‌ಈ ಹಿನ್ನೆಲೆಯಲ್ಲಿ ಮೇ 24 ರಿಂದ ಜೂನ್ 7 ರವರೆಗೆ ಸರಕಾರ ವಿಧಿಸಿರುವ ಕರ್ಫ್ಯೂ ನಿಯಮಗಳಿಗೆ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ಮೇ 24 ರ ಬೆಳಗ್ಗೆ 6 ಗಂಟೆಯಿಂದ ಜೂನ್ 7 ರ ಬೆಳಗ್ಗೆ 6 ಗಂಟೆಯವರೆಗೆ ಈ ಕಠಿಣ ನಿಯಮ ಜಾರಿಯಲ್ಲಿರಲಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ‌ ನೀಡಲಾಗಿದೆ. ಹೊಸ ಮಾರ್ಗಸೂಚಿ ಪ್ರಕಾರ ಪ್ರತಿ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ತರಕಾರಿ, ದಿನಸಿ ಮತ್ತಿತರ ಜೀವನಾವಷ್ಯಕ ವಸ್ತುಗಳನ್ನು ಅಂಗಡಿಗಳಿಗೆ ತೆರಳಿ ಖರೀದಿ ಮಾಡಲು ಅವಕಾಶವಿದೆ. ಉಳಿದ ದಿನಗಳಲ್ಲಿ ಮನೆಮನೆಗೆ ಪೂರೈಕೆ ಮಾಡಲಾಗುತ್ತದೆ.

ಯಾವುದೇ ಮದುವೆ ಕಾರ್ಯಗಳಿಗೆ ಅನುಮತಿ ಇಲ್ಲ. ಸೂಕ್ತ ಗುರುತಿನ ಚೀಟಿ ಹೊಂದಿರುವ ವಾಹನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಕಾರವಾರ

Exit mobile version