ಕುಮಟಾ : ಲಾರಿಯಲ್ಲಿ ಹಿಂಸಾತ್ಮಕವಾಗಿ, ಅಕ್ರಮವಾಗಿ ಜಾನುವಾರುಗಳನ್ನು ತುಂಬಿಕೊoಡು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಕುಮಟಾ ಪೊಲೀಸರು ಬಂಧಿಸಿದ್ದಾರೆ. ಜಾನುವಾರುಗಳನ್ನು ಯಾವುದೇ ಪರವಾನಗಿ ಇಲ್ಲದೇ ಪಂಜಾಬ್ ನಿಂದ ಉಡುಪಿಗೆ ಸಾಗಾಣಿಕೆ ಮಾಡಲಾಗುತ್ತಿತ್ತು. 14 ಜಾನುವಾರುಗಳ ಮೌಲ್ಯ ಸುಮಾರು 2.80 ಲಕ್ಷ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆ ವೇಳೆ ಕಪ್ಪು-ಬಿಳಿ ಬಣ್ಣದ ಜರ್ಸಿ ತಳಿಯ ಒಟ್ಟು 14 ಗೋವುಗಳನ್ನು ರಕ್ಷಿಸಲಾಗಿದೆ. ಸಾಗಾಟ ಮಾಡುತ್ತಿದ್ದ ವಾಹನವನ್ನು ಕುಮಟಾ ಪೊಲೀಸರು ಹೊಳೆಗದ್ದೆ ಟೋಲ್ ಗೇಟ್ ಬಳಿ ಹಿಡಿದು, ಜಾನುವಾರಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪಂಜಾಬ್‌ನಸಾಹಿಬ್ ಪಾಟೇಗಾರ ನಿವಾಸಿಯಾದ ಅನೀಲಕುಮಾರ ಚಾರಂಜಿತ್ ರತನ ಮತ್ತು ಜಗದೀಪ ಸಿಂಗ್ ಅವನ್ನು ಬಂಧಿಸಲಾಗಿದೆ.
ಹೊಳೆಗದ್ದೆ ಟೋಲ್ ಗೇಟ್ ಸಮೀಪ ವಾಹನ ಪರಿಶೀಲಿಸುತ್ತಿರುವಾಗ ಅಕ್ರಮವಾಗಿ ಜಾನುವಾರಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ತಕ್ಷಣ ಟೋಲ್ ಗೇಟ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕಾರ್ಯಾಚರಣೆಗಿಳಿದ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಚಾಲಕ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ವಿಸ್ಮಯ ನ್ಯೂಸ್, ಕುಮಟಾ