ಉತ್ತರಕನ್ನಡದಲ್ಲಿ ನಾಳೆ ಏನೆಲ್ಲ‌ ಇರುತ್ತೆ? ಲಾಕ್ ಡೌನ್ ಸಡಿಲಿಕೆ ಬಗ್ಗೆ ಜಿಲ್ಲಾಧಿಕಾರಿಗಳು ಹೇಳಿದ್ದೇನು? ಎಲ್ಲೆಲ್ಲಿ ನಿರ್ಭಂಧ ಮುಂದುವರಿಕೆಯಾಗಿದೆ ನೋಡಿ?

ಕಾರವಾರ: ಉತ್ತರಕನ್ನಡದಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಸಿಎಂ ಆದೇಶದಂತೆ ಜೂನ್ 14 ರಿಂದ 21 ವರೆಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ವರೆಗೆ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ಮಾಡಿಕೊಡಲಾಗಿದೆ.

ಮಧ್ಯಾಹ್ನ ಎರಡು ಘಂಟೆ ವರೆಗೆ ಮಾತ್ರ ಮದ್ಯದ ಅಂಗಡಿ ತೆರೆಯಲು ಅವಕಾಶ ಇದೆ. ಉಳಿದಂತೆ ಜಿಲ್ಲೆಯಲ್ಲಿ ಶನಿವಾರ ಮತ್ತು ಭಾನುವಾರ ವಾರಾಂತ್ಯದ ಲಾಕ್ ಡೌನ್ ಮುಂದುವರೆಯಲಿದೆ.

ಆದರೆ ಉತ್ತರಕನ್ನಡದ ಮೈಕ್ರೋ ಕಂಟೈನ್ಮೆಂಟ್ ಝೋನ್ ನಲ್ಲಿ ಎಂದಿನಂತೆ ಲಾಕ್ ಡೌನ್ ಮುಂದುವರಿಕೆ ಮಾಡಲಾಗಿದೆ. ಈ ಪ್ರದೇಶಗಳಲ್ಲಿ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆಯುವಂತಿಲ್ಲ.

ಗೋವಾ-ಕರ್ನಾಟಕ ಗಡಿಯಲ್ಲಿ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ, ಪಾರ್ಕ ಗಳಲ್ಲಿ ಬೆಳಗ್ಗೆ 5 ರಿಂದ 10 ಘಂಟೆ ವರೆಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ ಎಂದು ಮಾಹಿತಿ‌ ನೀಡಿದರು.

ವಿಸ್ಮಯ ನ್ಯೂಸ್ ಕಾರವಾರ

Exit mobile version