ಮಾಹಿತಿ
Trending

ನೊಂದವರ ಪಾಲಿನ ಅಕ್ಷಯ ಪಾತ್ರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಹೊನ್ನಾವರ ಇವರ ಮಾರ್ಗದರ್ಶನದಲ್ಲಿ ಕೊರೊನಾ ಸಂಕಷ್ಟ ಪರಿಸ್ಥಿತಿಯಲ್ಲಿ ಬಡವರು ಯಾರೂ ಸಹ ಹಸಿವಿನಿಂದ ಬಳಲಬಾರದು ಎಂಬುದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವಿರೇಂದ್ರ ಹೆಗ್ಗಡೆಯವರ ಉದ್ದೇಶವಾಗಿತ್ತು ಅಂತಹ ಬಡವರನ್ನು ಗುರುತಿಸಿ ಅವರುಗಳಿಗೆ ಆಹಾರ ಕಿಟ್‌ಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ನೀಡಲಾಗಿದ್ದು ನಿಜಕ್ಕೂ ಶ್ಲಾಘನೀಯ ಎಂಬುದಾಗಿ ಪೋಲಿಸ ಠಾಣೆಯ ಪಿ.ಎಸ್.ಐ. ಶ್ರೀ ಮಹಾಂತೇಯ ನಾಯಕ ಅಭಿಪ್ರಾಯ ಪಟ್ಟರು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ|| ಡಿ. ವಿರೇಂದ್ರ ಹೆಗ್ಗಡೆಯವರು ತಾಲೂಕಿನ 297 ಕಡು ಬಡ ಕುಟುಂಬಗಳಿಗೆ ಆಹಾರ ಕಿಟ್ ಮಂಜೂರು ಮಾಡಿದ್ದು ಈಗಾಗಲೇ ವಿತರಿಸಿದ್ದು ಸಮಾರೋಪ ವಿತರಣೆಯಲ್ಲಿ ಪಾಲ್ಗೊಂಡು ಪಾಲುದಾರರಿಗೆ ನೀಡಲಾದ ಆಹಾರದ ಕಿಟಗಳನ್ನು ವಿತರಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಉತ್ತರ ಕನ್ನಡ ಜಿಲ್ಲಾ ನಿರ್ದೇಶಕರಾದ ಶ್ರೀ ಶಂಕರ ಶೆಟ್ಟಿ ಸರ್ ರವರು, ಸಂಸ್ಥೆಯ ಕಾರ್ಯಕ್ರಮಗಳ ಬಗ್ಗೆ ಮತ್ತು ಜಿಲ್ಲೆಗೆ ಸಂಸ್ಥೆಯಿoದ ನೀಡಿದ ಸೌಲಭ್ಯಗಳ ಬಗ್ಗೆ ಹಾಗೂ ಸೇವಾ ಕಾರ್ಯಗಳ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿ ಸಂಸ್ಥೆಯು ಕರೋನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದು ಗ್ರಾಮೀಣ ಭಾಗದಲ್ಲಿ ಪಾಲುದಾರ ಕುಟುಂಬಳಿಗೆ ವ್ಯಾಕ್ಷಿನೇಶನ್ ಬಗ್ಗೆ ಮಾಹಿತಿ, ಮಾಸ್ಕ ಬಳಕೆ, ಸಾಮಾಜಿಕ ಅಂತರ ಅನುಪಾಲನೆ ಕುರಿತು ಜಾಗೃತಿ ಮೂಡಿಸುತ್ತಿದೆ ಎಂದರು ನಂತರ ಆಹಾರ ಕಿಟ್ ವಿತರಿಸಿ ಪಾಲುದಾರ ಬಂಧುಗಳಿಗೆ ಆತ್ಮಸ್ಥೈರ್ಯ ಮೂಡಿಸಿದರು.

ನಂತರ ಮಾತನಾಡಿದ ಶ್ರೀ ಜ್ಞಾನೇಶ್ವರಿ ಮಠದ ಮ್ಯಾನೇಜರ್ ಆದ ಶ್ರೀ ದತ್ತಾ ಅನ್ವೇಕರ ರವರು ಮಾತನಾಡಿ ಕರೋನಾ 2 ನೇ ಅಲೆ ರಾಜ್ಯದಲ್ಲಿ ಅಂತ್ಯoತ ಗಂಭೀರವಾದ ಪರಿಣಾಮವನ್ನುಂಟು ಮಾಡಿದ್ದು ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕರೋನಾ ಪರಿಸ್ಥಿತಿ ನಿಭಾಯಿಸುವಲ್ಲಿ ಅನೇಕ ಕಾರ್ಯಕ್ರಮಗಳನ್ನು ನೀಡಿ ಸರ್ಕಾರದೊಂದಿಗೆ ಕೈಜೋಡಿಸುವ ಮೂಲಕ, ಉದಾರತೆ ಮೆರೆದಿದೆ ಎಂದರಲ್ಲದೆ ಸಮಾಜದ ಬಡ ಜನರ ಹಸಿವು ನೀಗಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ ಎಂದರು.

ಈ ಸಭೆಯಲ್ಲಿ ಕರ್ಕಿ ಒಕ್ಕೂಟದ ಅಧ್ಯಕ್ಷರಾದ ಪದ್ಮಾವತಿ ಸತ್ಯನಾರಾಯಣ ನಾಯ್ಕ, ತೊಪ್ಪಲಕೇರಿ ಒಕ್ಕೂಟದ ಅಧ್ಯಕ್ಷರಾದ ಅಶ್ವಿನಿ ಶಂಕರ ಮೆಸ್ತ, ಮೇಲ್ವಿಚಾರಕರು ಉಪಸ್ಥಿತಿಯಲ್ಲಿದ್ದರು. ಹೊನ್ನಾವರ ವಲಯ ಮೇಲ್ವಿಚಾರಕರಾದ ಶ್ರೀ ನಾಗರಾಜ ಕೆ ಸರ್ವರನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಸೇವಾಪ್ರತಿನಿಧಿ ಶ್ರೀಮತಿ ದೀಪಾರವರು ವಂದಿಸಿದರು. ಸೇವಾಪ್ರತಿನಿಧಿ ಶ್ರೀಮತಿ ಜಯಲತಾ ಉಪಸ್ಥಿತರಿದ್ದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button