Follow Us On

WhatsApp Group
Important
Trending

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಆಂಬುಲೆನ್ಸ್: ಹಿಂಬದಿಯ ಬಾಗಿಲು ತೆರೆದು ಒಳಗಿದ್ದವರ ರಕ್ಷಣೆ

ಕುಮಟಾ: ಆಂಬುಲೆನ್ಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆಯ ಮೇಲೆ ಪಲ್ಟಿ ಆಗಿರುವ ಘಟನೆ ನಡೆದಿದೆ ಧಾರೇಶ್ವರ ಸಮೀಪ ನಡೆದಿದೆ. ದುರ್ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆಂಬುಲೆನ್ಸ್ ನಲ್ಲಿ ಇದ್ದ ಸವಾರರನ್ನು ಹಿಂಬದಿಯ ಬಾಗಿಲು ತೆರೆದು ರಕ್ಷಣೆ ಮಾಡಲಾಗಿದೆ.

ರೋಗಿಯೊಬ್ಬರನ್ನು ಕರೆದುಕೊಂಡು ಹೋಗಿ ಹುಬ್ಬಳ್ಳಿಗೆ ಬಿಟ್ಟು ಹುಬ್ಬಳ್ಳಿಯಿಂದ ಉಡುಪಿಗೆ ವಾಪಸ್ ಹೋಗುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆಯ ಪಕ್ಕದಲ್ಲಿರುವ ರಕ್ಷಕಕ್ಕೆ ಗುದ್ದಿ ಪಲ್ಟಿ ಹೊಡೆದು ಈ ಘಟನೆ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದರಿAದ ಕೆಲಕಾಲ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತತೆ ಉಂಟಾಗಿತ್ತು. ಕುಮಟಾ ಪೋಲೀಸರು ಸ್ಥಳಕ್ಕೆ ಬಂದು ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button