Follow Us On

WhatsApp Group
Big News
Trending

ಕಟ್ಟಡದ ಮೇಲ್ಫಾವಣಿ ತೆರವುಗೊಳಿಸುವ ವೇಳೆ ಗೋಡೆ ಕುಸಿತ; ಮಣ್ಣಿನಡಿ ಸಿಲುಕಿಕೊಂಡ ಕಾರ್ಮಿಕ ಸ್ಥಳದಲ್ಲೇ ಸಾವು: ಇನ್ನೋರ್ವನಿಗೆ ಗಾಯ

ಹಳೆಯ ಕಟ್ಟಡದ ಮೇಲ್ಛಾವಣಿ ತೆರುವುಗೊಳಿಸುತ್ತಿರುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದ್ದು, ಸ್ಥಳದಲ್ಲಿನ‌ ದೃಶ್ಯ‌ ಮನಕಲುಕುವಂತಿತ್ತು. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮೃತದೇಹವನ್ನು ಹೊರ ತೆಗೆಯುವಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಟ್ಟರು.

ಕಾರವಾರ: ಹಳೆಯ ಕಟ್ಟಡದ ಮೇಲ್ಛಾವಣಿ ತೆರುವುಗೊಳಿಸುತ್ತಿದ್ದ ವೇಳೆ, ಕಟ್ಟಡದ ಗೋಡೆ ಕುಸಿದು ಓರ್ವ ಕಾರ್ಮಿಕ ಮೃತ ಪಟ್ಟು, ಇನ್ನೊರ್ವ ಕಾರ್ಮಿಕ ಗಾಯಗೊಂಡ ಘಟನೆ ತಾಲೂಕಿನ ಸದಾಶಿವಘಡದ ವೈಶ್ಯವಾಡಾದಲ್ಲಿ ಗುರುವಾರ ಸಂಭವಿಸಿದೆ.

ಬಾದಾಮಿಯ ಕಾರ್ಮಿಕ ಹಾಲಿ ಹಬ್ಬುವಾಡದಲ್ಲಿ ನೆಲೆಸಿದ್ದ ಹುಚ್ಚಪ್ಪ ಸುಣಗಾರ (35) ಕಟ್ಟಡದ ಅವಶೇಷಗಳ ಅಡಿ ಸಿಲುಕಿ ದಾರುಣವಾಗಿ ಮೃತ ಪಟ್ಟ ದುರ್ದೈವಿಯಾಗಿದ್ದಾನೆ.

ಇನ್ನೊರ್ವ ಕಾರ್ಮಿಕ ಬೇಲೂರಪ್ಪ ತೋಟಿಕಲ್ ಎಂಬಾತನಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಸ್ಥಳೀಯರ ಸಹಕಾರದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಳಸಿಬಾಯಿ ಎನ್ನುವವರಿಗೆ ಸೇರಿದ ಹಳೆಯ ಕಟ್ಟಡದ ಮೇಲ್ಛಾವಣಿ ತೆರುವುಗೊಳಿಸುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮೃತದೇಹವನ್ನು ಹೊರ ತೆಗೆಯುವಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಟ್ಟರು.

ಚಿತ್ತಾಕುಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿದಂತೆ ಪಿ ಎಸ್ ಐ ಈ.ಸಿ.ಸಂಪತ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button