ಅಂಕೋಲಾ ಜೂ 25 : ತಾಲೂಕಿನಲ್ಲಿ ಶುಕ್ರವಾರ 3 ಹೊಸ ಕೋವಿಡ್ ಕೇಸಗಳು ದಾಖಲಾಗಿದ್ದು ಒಟ್ಟೂ 53 ಪ್ರಕರಣಗಳು ಸಕ್ರಿಯವಾಗಿದೆ. ಸೋಂಕು ಮುಕ್ತರಾದ 14 ಜನರನ್ನು ಬಿಡುಗಡೆ ಗೊಳಿಸಲಾಗಿದೆ. ಒಟ್ಟು 14 ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊವಿಡ್ ಕೇರ್ ಸೆಂಟರನಲ್ಲಿ ಶೂನ್ಯ ಪ್ರಕರಣವಿದ್ದು, ಹೋಂ ಐಸೋಲೇಶನ್ ನಲ್ಲಿ 39 ಜನರಿದ್ದಾರೆ.
ಕೊವಿಡ್ ಲಸಿಕೆ ಕೊರತೆ ಮತ್ತಿತರ ಕಾರಣಗಳಿಂದ ಶನಿವಾರ ತಾಲೂಕಿನಲ್ಲಿ ಒಂದು ದಿನದ ಮಟ್ಟಿಗೆ ವ್ಯಾಕ್ಸಿನೇಶನ್ ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ವ್ಯಾಕ್ಸಿನೇಶನ್ ನಿರೀಕ್ಷೆಯಲ್ಲಿರುವ ಸಾರ್ವಜನಿಕರು ಸಹಕರಿಸುವಂತೆ ತಾಲೂಕಾ ಆರೋಗ್ಯ ಅಧಿಕಾರಿ ಡಾ. ನಿತೀನ್ ಹೊಸ್ಮೇಲಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ