79 ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಗಾಂಜಾ,ಚರಸ್ ಸೇರಿ ಅಂದಾಜು ಕಾಲು ಕೋಟಿ,ರೂ.ಮೌಲ್ಯದ ಮಾದಕ ವಸ್ತುಗಳ ನಾಶ!! ಜಿಲ್ಲಾ ಪೋಲೀಸ್ ವರಿಷ್ಠರ ಮಾರ್ಗದರ್ಶನದಲ್ಲಿ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗಳು


ಅಂಕೋಲಾ:ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧ ದಿನಾಚರಣೆ ಪ್ರಯುಕ್ತ ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 79 ಬೇರೆ ಬೇರೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡ ಮಾದಕ ದ್ರವ್ಯಗಳನ್ನು, ಅಂಕೋಲಾದ ಬೊಗ್ರಿಬೈಲ್ ನ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ನಾಶ ಪಡಿಸಲಾಯಿತು.

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಜಪ್ತ ಪಡಿಸಿಕೊಂಡ ಮಾದಕ ದ್ರವ್ಯಗಳನ್ನು ನಾಶ ಪಡಿಸಲು ಮಾದಕ ದ್ರವ್ಯ ವಿಲೇವಾರಿ ಸಮಿತಿ ಮುಂದೆ ಹಾಜರು ಪಡಿಸಿ ಅನುಮತಿ ಪಡೆಯಲಾಗಿತ್ತು.

ಸುಮಾರು 89 ಕೆ.ಜಿ ಗಾಂಜಾ,504 ಗ್ರಾಂ ಚರಸ್ ಮತ್ತು 431 ಗಾಂಜಾ ಗಿಡಗಳು ಸೇರಿ ಒಟ್ಟು ಸುಮಾರು 24ಲಕ್ಷ 80 ಸಾವಿರದ 600 ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಘನ ತ್ಯಾಜ್ಯ ವಿಲೇವಾರಿ ಘಟಕದ ಮೂಲಕ ನಾಶ ಪಡಿಸಲಾಗಿದೆ .

ಬಾಕಿ ಉಳಿದಿರುವ ಮಾದಕ ದ್ರವ್ಯವನ್ನು ನಿಯಮಾನುಸಾರ ಮುಂದೆಯೂ ವಿಲೇವಾರಿ ಮಾಡಲಾಗುವುದು ಎಂದು
ಜಿಲ್ಲಾ ಪೊಲೀಸ್ ವರಿಷ್ಠ ಶಿವಪ್ರಕಾಶ ದೇವರಾಜು ತಿಳಿಸಿದ್ದಾರೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದು ಕರ್ತವ್ಯ ನಿರ್ವಹಿಸಿದರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Exit mobile version