ನ್ಯಾಯಾಲಯ ಕಟ್ಟಡದಲ್ಲಿ ಅಗ್ನಿ ಅವಘಡ: ದಾಖಲೆಗಳು ಸೇಫ್ : ಅಧಿಕಾರಿಗಳ ಸ್ಪಷ್ಟನೆ

ಭಟ್ಕಳ: ಜಿಲ್ಲೆಯ ಭಟ್ಕಳಪಟ್ಟಣದ ರಂಗಿನಕಟ್ಟೆಯಲ್ಲಿರುವ ಭಟ್ಕಳ ಜೆ.ಎಂ.ಎಫ್.ಸಿ. ನ್ಯಾಯಾಲಯ ಕಟ್ಟಡದಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ನಡೆದಿದೆ. ನ್ಯಾಯಾಲಯದ ಮುಂದಿನ ಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿದೆ.

ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರುವುದಾಗಿ ಪ್ರಥಮ ಮಾಹಿತಿಯನ್ನು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದು , ಬೆಳಿಗ್ಗೆ 4.15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಾಗ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಹಲವು ತಾಸುಗಳ ಪ್ರಯತ್ನದಿಂದ ಬೆಂಕಿ ನಂದಿಸಿದ್ದಾರೆ.

YouTube video player

ಆದರೆ ನ್ಯಾಯಾಲಯದಲ್ಲಿದ್ದ ಸಾವಿರಾರು ಕೇಸುಗಳ ಕಡತಗಳು ಸೇಫ್ ಆಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ ಶಿವಪೂಜಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ, ಭಟ್ಕಳ

Exit mobile version