Important
Trending

ಕುಮಟಾ ಪುರಸಭೆ ಪ್ರಕಟಣೆ

ಕುಮಟಾ: ಕುಮಟಾ ತಾಲೂಕಾಡಳಿತ ಮತ್ತು ಪುರಸಭೆಯ ಸಾರ್ವಜನಿಕ ಪ್ರಕಟಣೆ, ಪಟ್ಟಣದ ನಾಗರೀಕ ಬಂಧುಗಳೇ, ಕರೋನಾ ಸಾಂಕ್ರಾಮಿಕ ರೋಗ ಹರಡದಂತೆ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳ ಆದೇಶದಂತೆ ಔಷದಿ ಅಂಗಡಿ ಹೊರತುಪಡಿಸಿ ಬೆಳಿಗ್ಗೆ 7. ಗಂಟೆಯಿಂದ ಸಂಜೆ 6. ಗಂಟೆಯವರೆಗೆ ಮಾತ್ರ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಅಂಗಡಿಕಾರರರಿಗೆ ಮತ್ತು ಸಾರ್ವಜನಿಕರಿಗೆ ಸಾಮಾಜಿಕ ಅಂತರವನ್ನು ಖಾಯ್ದುಕೊಳ್ಳುವಂತೆ ಹಾಗೂ ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ತಪ್ಪಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ತಿಳಿಯಪಡಿಸಿದೆ. ಪಟ್ಟಣದ ಎಲ್ಲಾ ರೀತಿಯ ಅಂಗಡಿಕಾರರಿಗೆ ಉದ್ದಿಮೆ ಪರವಾನಿಗೆಯನ್ನು ಪುರಸಭೆಯಿಂದ ಪಡೆದುಕೊಳ್ಳುವುದನ್ನು ಕಡ್ಡಾಯಗೋಳಿಸಲಾಗಿರುತ್ತದೆ. ಸಂಜೆ 7. ಗಂಟೆ ನಂತರ ಬೆಳಿಗ್ಗೆ 7. ಗಂಟೆಯವರೆಗೆ ಸಾರ್ವಜನಿಕರು ವೈದ್ಯಕೀಯ ಕಾರಣ ಹೊರತುಪಡಿಸಿ ಪಟ್ಟಣದಲ್ಲಿ ಓಡಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಭಾನುವಾರ ಮಾತ್ರ ಔಷಧಿ ಅಂಗಡಿ ಹೊರತುಪಡಿಸಿ ಎಲ್ಲಾ ರೀತಿಯ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಇಡುವಂತೆ ಆದೇಶಿಸಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಯಾವುದೇ ಆದೇಶವನ್ನು ಉಲ್ಲಂಘಿಸಿದರೆ ಅಥವಾ ಸಹಕರಿಸದೇ ಇದ್ದಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗುವುದು ಹಾಗೂ ಇಂತಹವರ ವಿರುದ್ಧ ಕ್ರಮಕೈಗೊಳ್ಳಲಾಗುವುದೆಂದು ತಿಳಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಇದಕ್ಕೆ ಆಸ್ಪದ ಕೊಡದೇ ಕೊರೋನಾ ನಿಯಂತ್ರಿಸಲು ಸಹಕರಿಸುವಂತೆ ವಿನಂತಿಸಿದೆ.

Back to top button