ಮೀನು ಸಾಗಾಟದ ಕಂಟೇನರ್ ನಲ್ಲಿ ಅಕ್ರಮವಾಗಿ ಸಾಗಾಟ: 20 ಲಕ್ಷ ಮೌಲ್ಯ ಮೌಲ್ಯದ ಸ್ವತ್ತು ವಶಕ್ಕೆ

ಕಾರವಾರ: ಮೀನು ಸಾಗಾಟದ ಕಂಟೇನರ್‌ನಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ಮಾಜಾಳಿ ಬಳಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಲಾರಿಯನ್ನ ವಶಪಡಿಸಿಕೊಂಡಿದ್ದಾರೆ.

ಈ ವೇಳೆ ಅಕ್ರಮ‌ ಗೋವಾ ಮದ್ಯ, ಕಂಟೇನರ್ ಲಾರಿ ಸೇರಿದಂತೆ ಒಟ್ಟು ಸುಮಾರು 20 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಆರೋಪಿ ಕಂಟೇನರ್ ಲಾರಿ ಚಾಲಕ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕಾವೂರು ತಾಲ್ಲೂಕಿನ ನಿವಾಸಿ ಮನೋಜ್ ಪುನಿವರ್ತಿ(29) ಎನ್ನುವವನನ್ನು ಬಂಧಿಸಲಾಗಿದೆ.

ಬೆಳಗಿನ ಜಾವ 5:15ರ ಸುಮಾರಿಗೆ ಅಬಕಾರಿ‌ ಸಿಬ್ಬಂದಿ ಮಾಜಾಳಿ ಚೆಕ್ ಪೋಸ್ಟ್‌ನಲ್ಲಿ ಆಂಧ್ರಪ್ರದೇಶ ನೋಂದಣಿಯ ಕಂಟೇನರ್ ಲಾರಿಯನ್ನು ತಪಾಸಣೆಗೊಳಪಡಿಸಿದ್ದರು. ಈ ವೇಳೆ ಲಾರಿಯೊಳಗೆ 250 ಖಾಲಿ ಮೀನು ಸಾಗಾಟದ ಟ್ರೇಗಳನ್ನು ಇಟ್ಟುಕೊಂಡು ಅದರ ನಡುವೆ ಗೋವಾ ಮದ್ಯವನ್ನು ಸಾಗಾಟ ಮಾಡಲಾಗುತ್ತಿದ್ದು ಪತ್ತೆಯಾಗಿದೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್ ಕಾರವಾರ

Exit mobile version