ಭಟ್ಕಳಕ್ಕೆ ಭೇಟಿ ನೀಡಿದ ಎಟಿಎಸ್ ಟೀಮ್ : ಹಲವು ಮನೆಗಳಿಗೆ ಭೇಟಿ: ಎಟಿಎಸ್ ಅಧಿಕಾರಿಗಳು ಭಟ್ಕಳಕ್ಕೆ ಭೇಟಿ ನೀಡಿದ್ಯಾಕೆ ನೋಡಿ?

ಭಟ್ಕಳ :ಪುಣೆಯ ಜರ್ಮನ್ ಬೇಕರಿ ಬಾಂಬ್ ಸ್ಫೋಟ ಪ್ರಕಣಕ್ಕೆ ಸಂಬಂಧಿಸಿದಂತೆ ಪುಣೆಯ ಎ.ಟಿ.ಎಸ್ ತಂಡ (ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ ) ಬುಧುವಾರ  ಭಟ್ಕಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ .  ಪುಣೆಯ ಜರ್ಮನ್ ಬೇಕರಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ರಿಯಾಜ್ ಭಟ್ಕಳ ಆಗಿದ್ದು , ಆತನ ಸಂಬಂಧಿಕರು ಭಟ್ಕಳದಲ್ಲಿ ಬೇಕರಿ ನಡೆಸುತ್ತಿದ್ದಾರೆಂಬ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು ರಿಯಾಜ್ ಭಟ್ಕಳ  ಸಂಬಂಧಿಕರ ಬೇಕರಿ ಹಾಗೂ ಯಾಸಿನ್ ಭಟ್ಕಳ್ ಮತ್ತು ಇಕ್ಬಾಲ್ ಸಹೋದರರ ಮನೆಗಳಿಗೂ ಕೂಡ ಭೇಟಿ ನೀಡಿದ್ದಾರೆ ಎಂಬ ಮಾಹಿತಿ  ಲಭ್ಯವಾಗಿದೆ .

ಬೆಂಗಳೂರಿನಲ್ಲಿ ಪಾಸ್ ಪೋರ್ಟ್ ಪಡೆದಿರುವ ಶಂಕೆ : ರಿಯಾಜ್ ಭಟ್ಕಳ್ ಇಕ್ಬಾಲ್ ಭಟ್ಕಳ ಸೋದರರು ಮುಂಬಯಿಯಲ್ಲೇ ಹುಟ್ಟಿ ಬೆಳೆದರೂ ಅವರ ಕುಟುಂಬದ ಮೂಲ ಭಟ್ಕಳ ವಾಗಿರುವುದರಿಂದ ಇವರ ಸಂಬಂಧಿಕರು ಕೆಲವರು ಇಲ್ಲೇ ನೆಲೆಸಿದ್ದಾರೆ. ಈ ಸಂಬಂಧ ರಿಯಾಜ್ ಹಾಗೂ ಇಕ್ಬಾಲ್ ಸೋದರರು ಕೆಲಕಾಲ ಭಟ್ಕಳದಲ್ಲಿ ಬಂದು ನೆಲೆಸಿದ್ದರು.ಮುಂಬಯಿಯಲ್ಲೇ ಹುಟ್ಟಿ ಬೆಳೆದರೂ ಇವರಿಬ್ಬರ ಪಾಸ್ ಪೋರ್ಟ್ ಬೆಂಗಳೂರಿನಲ್ಲಿ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ .

ರಾಜ್ಯದಲ್ಲಿ ಹುಟ್ಟಿ ಇನ್ನೊಂದು ರಾಜ್ಯದ  ಪಾಸ್ ಪೋರ್ಟ್ ಪಡೆದಿದ್ದರೆ ಅದು ಹೇಗೆ ಸಾಧ್ಯ ಎಂಬ  ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ದೊರಕಿದೆ . ಈ ಸಂಬoಧ ಎಟಿಎಸ್ಅಧಿಕಾರಿಗಳ ತನಿಖೆ ತೀವ್ರಗೊಂಡಿದೆ.

ಉದಯ್ ಎಸ್ ನಾಯ್ಕ, ಭಟ್ಕಳ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Exit mobile version