Follow Us On

WhatsApp Group
Info
Trending

ದೇವರಕಾಡಿನಲ್ಲಿ ವನಮಹೋತ್ಸವ: ಪ್ರಕೃತಿಯ ಜೊತೆಗಿನ ಸಹಬಾಳ್ವೆಯಿಂದ ನೆಮ್ಮದಿಯ ಬದುಕು:ಡಿಸಿಎಫ್ ಗಣಪತಿ

ಹೊನ್ನಾವರ: ಕೋವಿಡ್ ಸೃಷ್ಟಿಸಿದ ಸಂಕಷ್ಟ ಪ್ರಕೃತಿಯ ಜೊತೆಗಿನ ಸಹಬಾಳ್ವೆಯ ಜೀವನದ ಮಹತ್ವವನ್ನು ಇನ್ನಷ್ಟು ಮನದಟ್ಟು ಮಾಡಿದೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ.ಕೆ.ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆ ಹಾಗೂ ಕಾಮಕೋಡ ಪರಿಸರ ಕೂಟ ಇವುಗಳ ಸಹಯೋಗದಲ್ಲಿ ಹೆರಾವಲಿ ಗ್ರಾಮದ ಹಾಚಲಮಕ್ಕಿಯ ಕಾಮಕೋಡ ದುರ್ಗಮ್ಮ ದೇವಿ ದೇವರಕಾಡಿನಲ್ಲಿ ಗುರುವಾರ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ವೃಕ್ಷಾರೋಪಣ ನೆರವೇರಿಸಿ ಅವರು ಮಾತನಾಡಿದರು.

ಕೋವಿಡ್ ಸೃಷ್ಟಿಸಿದ ಸಂಕಷ್ಟದ ಸ್ಥಿತಿ ಪ್ರಕೃತಿಯ ಮಹತ್ವದ ಬಗ್ಗೆ ಹೆಚ್ಚಿನ ಅರಿವು ಮೂಡಿಸಿದೆ.ವಾಯು ಮಾಲಿನ್ಯದಿಂದ ನಗರ ಪ್ರದೇಶಗಳಲ್ಲಿ ಶ್ವಾಸಕೋಶದ ಸೋಂಕು ಹೆಚ್ಚುತ್ತಿದ್ದು ಜನರು ಹಳ್ಳಿಯತ್ತ ಮುಖ ಮಾಡುತ್ತಿದ್ದಾರೆ.ಪರಿಸರದ ಸಮತೋಲನ ಕಾಪಾಡುವಲ್ಲಿ ಅರಣ್ಯದ ಪಾತ್ರ ಪ್ರಮುಖವಾಗಿದ್ದು ಗಿಡ ಮರಗಳಲ್ಲಿ ದೈವತ್ವವನ್ನು ಕಾಣುವ ದೇವರ ಕಾಡು ಅರಣ್ಯದ ಉಳಿವಿಗೆ ಹೆಚ್ಚಿನ ಕೊಡುಗೆ ನೀಡಿದೆ” ಎಂದು ಅವರು ಹೇಳಿದರು.

ಪರಿಸರಕ್ಕೆ ಧಕ್ಕೆಯಾಗದ ರೀತಿಯಲ್ಲಿ ಸಾಮಾನ್ಯ ಜನಜೀವನಕ್ಕೆ ಅಗತ್ಯವಾದ ಮೂಲಸೌಕರ್ಯ ಒದಗಿಸಬೇಕು.ನೆಲ-ಜಲವನ್ನು ದುರಾಸೆಗೆ ಬಲಿಕೊಡಬಾರದು.ಅರಣ್ಯ ರಕ್ಷಣೆಯಲ್ಲಿ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯವಾಗಿದ್ದು ಕಾಮಕೋಡ ದೇವರಕಾಡು ಈ ನಿಟ್ಟಿನಲ್ಲಿ ಮಾದರಿಯಾಗಿದೆ.ಇಲ್ಲಿಯ ಕೆರೆ ಅಭಿವೃದ್ಧಿಪಡಿಸುವ ಜೊತೆಗೆ ಇಲಾಖೆಯ ವತಿಯಿಂದ ಇಲ್ಲಿ ಉಳಿದ ಪರಿಸರ ಸ್ನೇಹಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.ವನ್ಯಪ್ರಾಣಿಗಳಿಂದ ರೈತರ ಬೆಳೆ ರಕ್ಷಿಸಲು ಅಗತ್ಯ ಸಹಕಾರ ನೀಡಲಾಗುವುದು’ ಎಂದು ಜನರೊಂದಿಗೆ ನಡೆಸಿದ ಸಂವಾದದಲ್ಲಿ ತಿಳಿಸಿದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಬೋರಯ್ಯ,ವಲಯ ಅರಣ್ಯಾಧಿಕಾರಿ ಶರತ್ ಶೆಟ್ಟಿ,ತಾಲ್ಲೂಕು ಪಂಚಾಯಿತಿ ಸದಸ್ಯ ಆರ್.ಪಿ.ನಾಯ್ಕ,ಗ್ರಾಮ ಪಂಚಾಯಿತಿ ಸದಸ್ಯರಾದ ನಾಗೇಶ ನಾಯ್ಕ,ಚಿದಾನಂದ ನಾಯ್ಕ,ವೈಷ್ಣವಿ ಪ್ರಭು,ಭಾರತೀ ನಾಯ್ಕ,ದೇವಸ್ಥಾನ ಸಮಿತಿಯ ಕಾರ್ಯದರ್ಶಿ ನೀಲಕಂಠ ನಾಯ್ಕ,ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ರವಿಕಾಂತ ಗೌಡ,ಗಣೇಶ ನಾಯ್ಕ,ವಾಮನ ನಾಯ್ಕ,ಶ್ರೀಧರ ಭಟ್ಟ ಉಪಸ್ಥಿತರಿದ್ದರು. ಕಾಮಕೋಡ ಪರಿಸರ ಕೂಟದ ಸಂಚಾಲಕ ಪ್ರೊ.ಎಂ.ಜಿ.ಹೆಗಡೆ ಸ್ವಾಗತಿಸಿದರು.ಪ್ರೊ.ನಾಗರಾಜ ಹೆಗಡೆ ಅಪಗಾಲ ವಂದಿಸಿದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button