ಗಾಂಜಾ ಮಾರಲು ಯತ್ನಿಸುತ್ತಿದ್ದ ಇಬ್ಬರ ಬಂಧನ: 3 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶಕ್ಕೆ

ಕಾರವಾರ: 3 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾವನ್ನು ಅಕ್ರಮವಾಗಿ ಸಾಗಾಟ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕಾರವಾರ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ಕೋಡಿಭಾಗದ ಸಾಗರ್ ದರ್ಶನ್ ಹಾಲ್ ಹಿಂಭಾಗದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿಕೊಂಡು ಬಂದು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸ್ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ನಗರ ಠಾಣೆ ಪಿಎಸ್ ಐ ಸಂತೋಷ್ ಕುಮಾರ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು. 

ಈ ವೇಳೆ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಕಾರವಾರ ಸಂಕ್ರಿವಾಡದ ರಿಜ್ವಾನ್ ಶೇಮ್ ಹಾಗೂ ಹಬ್ಬುವಾಡದ ಸಾಹಿಲ್ ಎಂಬಾತನನ್ನು ಬಂಧಿಸಿದ್ದರು. ಆರೋಪಿಗಳಿಂದ 3.20 ಲಕ್ಷ ರೂ ಬೆಲೆಯ 3.200 ಕೆಜಿ ಆಗುವಷ್ಟು ಗಾಂಜಾ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಕಾರವಾರದ ಪ್ರಮುಖ ಗಾಂಜಾ ಮಾರಾಟಗಾರರಾಗಿದ್ದು ಮಹಾರಾಷ್ಟ್ರದ ಪೂನಾದಿಂದ ಗಾಂಜಾ ಮಾದಕ ವಸ್ತುವನ್ನು ತಂದು ಕಾರವಾರದಲ್ಲಿ ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು.

ಆದರೆ ಇಂದು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದು ವಿಚಾರಣೆ ಮುಂದುವರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ರಾಜೇಶ ನಾಯಕ, ಸತ್ಯಾನಂದ ನಾಯ್ಕ, ತುಕಾರಾಮ ಬಣಕಾರ, ಹನುಮಂತ್ ರೆಡ್ಡರ್, ಮಹೇಶ ನಾಯ್ಕ, ನಾಮದೇವ ನಾಂದ್ರ, ಅರ್ಜುನ ದೇಸಾಯ, ಮಂಜುನಾಥ ಚಟಗಾರ ಇದ್ದರು.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ವಿಸ್ಮಯ ನ್ಯೂಸ್, ಕಾರವಾರ

Exit mobile version