ಭಟ್ಕಳ: ಮುರುಡೇಶ್ವರ ಸಮುದ್ರದಲ್ಲಿ ಈಜಲು ಬಂದ ಪ್ರವಾಸಿ ಯುವಕರಿಬ್ಬರು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದರು. ಇದನ್ನು ಗಮನಿಸಿದ ಅಲ್ಲಿನ ಸ್ಥಳೀಯ ಮೀನುಗಾರರು, ಇಬ್ಬರು ಯುವಕರನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ.
ಅನ್ ಲಾಕ್ -3 ಘೋಷಣೆಯಾದಂತೆ ಮುರುಡೇಶ್ವರಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಹೀಗೆ ಪ್ರವಾಸಕ್ಕೆ ಬಂದ ಯುವಕರ ತಂಡ ಶಿವನ ದರ್ಶನ ಪಡೆದು ಮೋಜು ಮಸ್ತಿಗೆ ಸಮುದ್ರಕ್ಕಿಳಿದ್ದಾರೆ. ಈ ವೇಳೆ ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿರುವುದನ್ನು ಗಮನಿಸಿದ ಸ್ಥಳೀಯ ಮೀನುಗಾರರಾದ ಈಶ್ವರ ಬಲುಂಡಿ, ಜಗದೀಶ ಮೊಗೇರ ಹಾಗೂ ಈಶ್ವರ ಪಟಾಲಿಗಾರ್ಡನ್ ರವರು ಪಾತಿದೋಣಿ ಸಹಾಯದಿಂದ ಯುವಕರ ರಕ್ಷಣೆಗೆ ಮುಂದಾಗಿದ್ದಾರೆ.
ಆದರೆ ಸಮುದ್ರ ಅಲೆ ಅಬ್ಬರ ಜೋರಾಗಿದ್ದರಿಂದ ರಕ್ಷಣೆಗೆ ಹೊದ ಪಾತಿದೋಣಿ ಕೂಡ ಮುಳುಗಡೆಯಾಗಿದೆ. ತಕ್ಷಣಕ್ಕೆ ಮೀನುಗಾರರ ಸಮಯ ಪ್ರಜ್ಞೆಯಿಂದ ಇನ್ನೊಂದು ದೋಣಿಯ ಸಹಾಯದಿಂದ ಪ್ರವಾಸಿಗರನ್ನು ಮತ್ತು ಪಾತಿ ದೋಣಿಯನ್ನೂ ರಕ್ಷಿಸುವಲ್ಲಿ ಮೀನುಗಾರರು ಯಶಸ್ವಿಯಾಗಿದ್ದಾರೆ. ಮೀನುಗಾರರ ಸಮಯ ಪ್ರಜ್ಞೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.