Focus News
Trending

ಉತ್ತರಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ ಭಾರೀ ಮಳೆ ಸಾಧ್ಯತೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಾದ್ಯಂತ ಮಳೆ ಅಬ್ಬರಿಸುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲೂ ಉತ್ತಮ ಮಳೆಯಾಗಿದೆ. ಮುಂಗಾರು ಚುರುಕುಗೊಂಡಿದ್ದು, ಉತ್ತರಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಹೌದು, ಬಂಗಾಳ ಉಪ ಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನಲೆಯಲ್ಲಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗಾಗಿ, ಇಂದು ಮತ್ತು ನಾಳೆ ಉತ್ತರಕನ್ನಡ ಸೇರಿ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಜುಲೈ 12 ಮತ್ತು 13 ರಂದು ಆರೆಂಜ್ ಅಲರ್ಟ್ ಹಾಗೂ ಜುಲೈ 14 ರಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 15ರ ತನಕ ಮಳೆ ಮುಂದುವರೆಯಲಿದೆ ಎಂಬ ಮಾಹಿತಿ ಬಂದಿದೆ. ಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ಏಳುವ ನಿರೀಕ್ಷೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button