ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಏಕಕಾಲದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಮೇ 28ರವರೆಗೆ ಮಳೆ ಮುಂದುವರಿಯಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ. ಸೋಮವಾರ ತುಮಕೂರು ಹಾಗೂ ರಾಮನಗರ ಸೇರಿ ವಿವಿಧೆಡೆ ಜೋರು ಮಳೆಯಾದರೆ ಉಳಿದೆಡೆ ತುಂತುರು ಮಳೆಯಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು, ಹಾಸನ, ಚಾಮರಾಜನಗರ, ಮೈಸೂರು, ತುಮಕೂರು, ಮಂಡ್ಯ ಮತ್ತು ಹಾಸನ ಮತ್ತಿತರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಜೋರು ಮಳೆಯಾದರೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತಿತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಕೇಂದ್ರ ನಿರ್ದೇಶಕ ಡಾ. ಜಿ.ಎಸ್ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.