ವಿಶ್ವಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಯಲ್ಲಿ ನೀರುತುಂಬಿ ಆತ್ಮಲಿಂಗ ಜಲಾವೃತ
ಭಕ್ತರಲ್ಲಿ ಕೆಲಕಾಲ ಆತಂಕ
ಗೋಕರ್ಣ: ಉತ್ತರಕನ್ನಡದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಗೋಕರ್ಣದ ಪುರಾಣ ಪ್ರಸಿದ್ಧ ಶಿವಲಿಂಗ ಇರುವ ಗರ್ಭಗುಡಿಗೆ ನೀರು ತುಂಬಿ, ಆತ್ಮಲಿಂಗ ಜಲಾವೃತವಾದ ಘಟನೆ ನಡೆದಿದೆ. ಹೌದು, ಆತ್ಮಲಿಂಗ ಜಲಾವೃತಗೊಂಡು ನಿತ್ಯ ಪೂಜಾ ವಿಧಿ ವಿಧಾನಕ್ಕೆ ಕೆಲಕಾಲ ವಿಳಂಬವಾಗಿತ್ತು. ಈ ಸಂಬoಧ ತಕ್ಷಣ ದೇವಾಲಯದ ಸಿಬ್ಬಂದಿ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರ ಉಪಸ್ಥಿತಿಯಲ್ಲಿ ಸಿಬ್ಬಂದಿಗಳೇ ನೀರು ಬಿಟ್ಟಿದ್ದಾರೆ, ದೇವಾಲಯವನ್ನು ಸ್ವಚ್ಛಗೊಳಿಸಿದ್ದಾರೆ.
ಪ್ರತಿ ವರ್ಷ ಮಳೆಗಾಲ ಪೂರ್ವದಲ್ಲಿ ದೇವಾಲಯದ ತೀರ್ಥ ಅಭಿಷೇಕದ ನೀರು ಹೋಗುವ ಸೋಮಸೂತ್ರ ನಲವನ್ನು ಸ್ವಚ್ಛಗೊಳಿಸಲಾಗುತ್ತದೆ. ಆದರೆ, ಈ ವರ್ಷ ಕೆಲಸ ಸೋಮಸೂತ್ರ ನಾಲಾವನ್ನು ಸ್ವಚ್ಛಗೊಳಿಸಿಲ್ಲ. ಹೀಗಾಗಿ ಇದರಿಂದ ನೀರು ವಾಪಸ್ ಬರುತ್ತಿದೆ ಎನ್ನಲಾಗಿದೆ.
ಗರ್ಭಗುಡಿಯ ನೀರು ಹೋಗುವ ಭಾಗದ ಸ್ಥಳವನ್ನು ಕೂಡ ಬಂದ್ ಮಾಡಲಾಗಿದೆ ಎನ್ನಲಾಗಿದ್ದು, ಜಲವಡೆದಾಗ ನೀರು ನಾಲದಲ್ಲಿ ಹೋಗದೇ ಹಿಮ್ಮುಖವಾಗಿ ಚಲಿಸಿ ಗರ್ಭಗುಡಿಗೆ ಬರುತ್ತಿದೆ ಎಂಬುದು ಕೆಲ ಸಾರ್ವಜನಿಕರ ದೂರು. ಇದಕ್ಕೊಂದು ಶಾಶ್ವತ ಪರಿಹಾರ ಒದಗಿಸಿಕೊಡಬೇಕೆಂದು ಭಕ್ತರು ಆಗ್ರಹಿಸಿದ್ದಾರೆ.
ವಿಸ್ಮಯ ನ್ಯೂಸ್, ಗೋಕರ್ಣ