ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಸಹೋದರನ್ನು ಭಟ್ಕಳ ನಗರ ಠಾಣೆಯ ಪೊಲೀಸರು ಬಂಧಿಸಿದ ಘಟನೆ ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಆರೋಪಿಗಳನ್ನು ಮಾದೇವ ಮಾಸ್ತಪ್ಪ ನಾಯ್ಕ ಹಾಗೂ ಕೃಷ್ಣ ಮಾಸ್ತಪ್ಪ ನಾಯ್ಕ ಮುಟ್ಟಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ.
ಈ ಸಹೋದರರಿಬ್ಬರು ವದೆ ಮಾಡುವ ಉದ್ದೇಶದಿಂದ 40 ಸಾವಿರ ಮೌಲ್ಯದ ಎರಡು ಕೋಣಗಳನ್ನು ಸೋಮವಾರ ಬೆಳಿಗ್ಗೆ 6.30ರ ಸುಮಾರಿಗೆ ಮುಟ್ಟಳ್ಳಿ ಕಡೆಯಿಂದ ಮುಟ್ಟಳ್ಳಿ ಬೈಪಾಸ್ ಕಡೆಗೆ ಯಾವುದೇ ಪಾಸ್ ಪರಮೀಟ್ ಇಲ್ಲದೆ ಸಾಗಾಟ ಮಾಡಿಕೊಂಡು ಹೋಗುವಾಗ ಇಲ್ಲಿನ ಬೈಪಾಸ್ ಸಮೀಪ ಕೋಣಗಳ ಸಮೇತ ಆರೋಪಿಗಳನ್ನು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬೆನ್ನೆಲ್ಲೆ ಒಂದು ವರ್ಷದಿಂದ ಮುಟ್ಟಳ್ಳಿ ಭಾಗದಲ್ಲಿ ಜಾನುವಾರು ಕಳ್ಳತನವಾಗುತ್ತಿತ್ತು ಎಂದು ಇಲ್ಲಿನ ಸಾರ್ವಜನಿಕರು ಆರೋಪಿಸಿದ್ದು , ಒಂದೇ ಮನೆಯಿಂದ 2 ಜಾನುವಾರು ಕಳ್ಳತನವಾದ ಉದಾಹರಣೆಗಳು ಕೂಡ ಇರುವುದು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ