Follow Us On

Google News
Important
Trending

ಶಾಸಕರೊಬ್ಬರ ಪಿಎ ಹೆಸರಿನಲ್ಲಿ ಶಾಸಕಿ ರೂಪಾಲಿ ನಾಯ್ಕ ಅವರಿಗೆ ವಂಚನೆ: ಕೊನೆಗೂ ಸಿಕ್ಕಿಬಿದ್ದ ಚಾಲಾಕಿ ವಂಚಕ

ಶಾಸಕ ಎನ್.ಮಹೇಶ್ ಅವರ ಆಪ್ತ ಸಹಾಯಕ ಎಂದು ಸುಳ್ಳು ಹೇಳಿ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅವರ ಬಳಿ 50 ಸಾವಿರ ರೂಪಾಯಿ ಹಣ ಪಡೆದು ಮೋಸ ಮಾಡಿದ ವ್ಯಕ್ತಿಯನ್ನು ಪೊಲೀಸರು, ಬಂಧಿಸಿದ್ದಾರೆ. ರಾಮನಗರದ ಕನಕಪುರ ತಾಲ್ಲೂಕಿನ ದೊಡ್ಡಮಳಲವಾಡಿ ಗ್ರಾಮದ ಸಚಿನ್ ಗೌಡ ಪೊಲೀಸರ ವಶದಲ್ಲಿರುವ ವ್ಯಕ್ತಿ.

ಈತ ಮೊದಲು ಶಾಸಕಿ ರೂಪಾಲಿ ನಾಯ್ಕ ಅವರಿಗೆ ದೂರವಾಣಿ ಕರೆ ಮಾಡಿ, ಶಾಸಕ ಎನ್.ಮಹೇಶ್ ಅವರ ಪಿಎ ಎಂಬುದಾಗಿ ಹೇಳಿ, ಅರ್ಜೆಂಟಾಗಿ 50 ಸಾವಿರ ರೂಪಾಯಿ ಹಣ ಕೊಡುವಂತೆ ಹೇಳಿದ್ದಾನೆ.ಸ್ನೇಹಿತನ ಬ್ಯಾಂಕ್ ಬ್ಯಾಂಕ್ ಖಾತೆ ನಂಬರ್ ಮೆಸೇಜ್ ಮಾಡಿ, ಅದಕ್ಕೆ ಹಣ ಹಾಕಿಸಿಕೊಂಡಿದ್ದಾನೆ. ಇದಾದ ಬಳಿಕ ಸ್ನೇಹಿತ ಮಹೇಶ್‌ಗೆ ಒಂದು ಸಾವಿರ ರೂಪಾಯಿ ಕೊಟ್ಟು 49 ಸಾವಿರ ತೆಗೆದುಕೊಂಡಿದ್ದಾನೆ.

ಬೆಳಕಿಗೆ ಬಂದಿದ್ದು ಹೇಗೆ? ಈ ಘಟನೆ ನಡೆದ ಬಳಿಕ ಬೆಂಗಳೂರಿನಲ್ಲಿ ಶಾಸಕ ಎನ್.ಮಹೇಶ್ ಮತ್ತು ಶಾಸಕಿ ರೂಪಾಲಿ ನಾಯ್ಕ ಮುಖಾಮುಖಿ ಭೇಟಿಯಾಗಿದ್ದರು. ಈ ವೇಳೆ ಹಣದ ವಿಚಾರ ತಿಳಿದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ವೇಳೆ ಶಾಸಕ ಮಹೇಶ್ ಪಿಎ ಮಹಾದೇವಸ್ವಾಮಿ ದೂರು ಕೊಟ್ಟಿದ್ದು, ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರು, ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button