ಯಲ್ಲಾಪುರ: ಉತ್ತರಕನ್ನಡದ ಹಲವೆಡೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ತಾಲೂಕಿನ ಪೊಲೀಸರು ಯಶಸ್ವಿಯಾಗಿದ್ದಾರೆ. ಇಲ್ಲಿನ ಶಾರದಾಗಲ್ಲಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣ ಸಂಬoಧ ತನಿಖೆ ನಡೆಸಿದ್ದ ಪೊಲೀಸರು ಆರೋಪಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕಾರವಾರದ ಶಿರವಾಡ ನಿವಾಸಿ ಅಶೋಕ ಬಂಡಿವಡ್ಡರ ಎಂದು ಗುರುತಿಸಲಾಗಿದೆ.
ಈತ ಅಂತರ್ ರಾಜ್ಯ ಕಳ್ಳ ಎನ್ನುವುದು ತನಿಖೆಯಲ್ಲಿ ತಿಳಿದುಬಂದಿದೆ. ಕಾರವಾರ, ಯಲ್ಲಾಪುರ, ಭಟ್ಕಳ, ಸಿದ್ದಾಪುರ ಹಾಗೂ ಶಿವಮೊಗ್ಗ ಜಿಲ್ಲೆಯ ಸೊರಬ, ಆನವಟ್ಟಿ, ಧಾರವಾಡ ಜಿಲ್ಲೆಯ ಕಲಘಟಗಿ, ಹುಬ್ಬಳ್ಳಿ ಹಾಗೂ ಹೊರರಾಜ್ಯ ಮಹಾರಾಷ್ಟ್ರದ ವಿವಿಧೆಡೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. 3-4 ವರ್ಷಗಳಲ್ಲಿ ಯಲ್ಲಾಪುರ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮನೆ ಕಳ್ಳತನ ಮತ್ತು ಬ್ಯಾಂಕ್ ಕಳ್ಳತನವನ್ನು ಮಾಡಿರುವ ಬಗ್ಗೆ ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.
ಬoಧಿತ ಆರೋಪಿಯಿಂದ ಸುಮಾರು 1 ಬಂಗಾರದ ಬ್ರೇಸ್‌ಲೈಟ್, 55 ಗ್ರಾಂ ತೂಕದ 2 ಬಂಗಾರದ ಚೈನ್, 3 ಬಂಗಾರದ ಲಕ್ಷ್ಮೀ ಪದಕ ಆಭರಣ ಸೇರಿ ಅಂದಾಜು ಎರಡುವರೆ ಲಕ್ಷ ಮೌಲ್ಯದ ಸ್ವತ್ತುಗಳನ್ನು ಹಾಗೂ ಸುಮಾರು 1 ಲಕ್ಷ ರೂಪಾಯಿ ಬೆಲೆಯ ಒಂದು ಪಲ್ಸರ್ ಮೋಟಾರ ಸೈಕಲ್‌ನ್ನು ವಶಪಡಿಸಿಕೊಳ್ಳಲಾಗಿದೆ.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
ವಿಸ್ಮಯ ನ್ಯೂಸ್, ಯಲ್ಲಾಪುರ